Mallikharjuna Kharge: ‘ಮೋದಿಯನ್ನು ಅಧಿಕಾರದಿಂದ ಇಳಿಸುವವರೆಗೂ ನಾನು ಸಾಯಲ್ಲ’ ಎನ್ನತ್ತ ವೇದಿಕೆಯಲ್ಲೇ ಕುಸಿದು ಬಿದ್ದ ಮಲ್ಲಿಕಾರ್ಜುನ ಖರ್ಗೆ

Share the Article

Mallikharjuna Kharge: ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಸಾಯಲ್ಲ ಎಂದು ಹೇಳುತ್ತಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು(Mallikharjun Kharge) ವೇದಿಕೆಯ ಮೇಲೆಯೇ ಕುಸಿದು ಬಿದ್ದ ವಿಚಿತ್ರ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ. ಈ ಕುರಿತು ವಿಡಿಯೋ ಕೂಡ ವೈರಲ್ ಆಗಿದೆ.

ಹೌದು, ಜಮ್ಮು ಕಾಶ್ಮೀರ(Jammu and Khashmir) ವಿಧಾನಸಭೆ ಚುನಾವಣೆ(Asembly Election) ಹಿನ್ನೆಲೆಯಲ್ಲಿ ಕಾಂಗ್ರೆಸ್ ಚುನಾವಣಾ ರ್ಯಾಲಿಗಳನ್ನು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಇದರಲ್ಲಿ ಭಾಗಿಯಾಗಿ ಜನರನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ಈ ವೇಳೆ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರುಸ್ಥಾಪಿಸಲು ಹೋರಾಟ ಮಾಡುತ್ತೇವೆ. ನನಗೆ 83 ವರ್ಷ, ನಾನು ಅಷ್ಟು ಬೇಗ ಸಾಯುವುದಿಲ್ಲ. ಪ್ರಧಾನಿ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಜೀವಂತವಾಗಿರುತ್ತೇನೆ ಎಂದು ಹೇಳಿದರು. ಅಲ್ಲದೆ ಭಾಷಣದ ವೇಳೆ ಖರ್ಗೆ ಅಸ್ವಸ್ಥರಾಗಿ ವೇದಿಗೆ ಮೇಲೆ ಕುಸಿದು ಬಿದ್ದರು. ತಕ್ಷಣ ಸುತ್ತುವರಿದ ಪಕ್ಷದ ಮುಖಂಡರು ಅವರನ್ನು ಕುರ್ಚಯಲ್ಲಿ ಕೂರಿಸಿದರು. ಕೆಲ ನಿಮಿಷಗಳ ನಂತರ, ಮತ್ತೆ ವೇದಿಕೆಗೆ ಬಂದ ಖರ್ಗೆ (Mallikarjun Kharge) ಅವರು ಮೋದಿ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದರು.

ಅಲ್ಲದೆ ಬಿಜೆಪಿಯನ್ನು ಗುರಿಯಾಗಿಟ್ಟುಕೊಂಡ ಖರ್ಗೆ, ಬಿಜೆಪಿಗರು ಎಂದಿಗೂ ಚುನಾವಣೆ ನಡೆಸಲು ಬಯಸುವುದಿಲ್ಲ. ಆದರೆ ಅವರು ಬಯಸಿದರೆ, ಅದನ್ನು ಒಂದು ಅಥವಾ ಎರಡು ವರ್ಷಗಳಲ್ಲಿ ಮಾಡಬಹುದಿತ್ತು. ಆದರೆ ಸುಪ್ರೀಂ ಕೋರ್ಟ್ ಆದೇಶದ ನಂತರ ಅವರು ಚುನಾವಣೆಗೆ ತಯಾರಿ ಆರಂಭಿಸಿದರು. ಅವರು ಖಂಡಿತವಾಗಿಯೂ ಚುನಾವಣೆಯನ್ನು ಬಯಸಿರಲಿಲ್ಲ ಎಂದು ವಾಗ್ದಾಳಿ ನಡೆಸಿದರು.

 

Leave A Reply