Mangaluru: ದ.ಕ. ಮತ್ತು ಉಡುಪಿ ವಿಧಾನ ಪರಿಷತ್ ಸ್ಥಾನಕ್ಕೆ ಸ್ಪರ್ಧಿಸಲು ಬಿಜೆಪಿಯಿಂದ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಅವಕಾಶ

Mangaluru: ವಿಧಾನ ಪರಿಷತ್ ಸ್ಥಾನಕ್ಕೆ ಕೋಟಾ ಶ್ರೀನಿವಾಸ ಪೂಜಾರಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಅಕ್ಟೋಬರ್ 21ರಂದು ಉಪಚುನಾವಣೆ ನಿಗದಿಯಾಗಿದೆ. ಈ ಬೆನ್ನಲ್ಲೇ ಬಿಜೆಪಿಯಲ್ಲಿ ಟಿಕೆಟ್ಗಾಗಿ ಆಕಾಂಕ್ಷಿಗಳು ತೀವ್ರ ಪೈಪೋಟಿ ನಡೆಸಿದ್ದರು.
ಇದೀಗ ಹೈಕಮಾಂಡ್ ಈ ಕ್ಷೇತ್ರಕ್ಕೆ ಕಿಶೋರ್ ಕುಮಾರ್ ಪುತ್ತೂರು (Mangaluru) ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.
ಕಿಶೋರ್ ಕುಮಾರ್ ಪುತ್ತೂರು ಅವರು ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಬೊಟ್ಯಾಡಿಯವರು.
ಕಿಶೋರ್ ಕುಮಾರ್ ದ.ಕ.ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ,ರಾಜ್ಯ ಉಪಾಧ್ಯಕ್ಷರಾಗಿ, ಮೆಸ್ಕಾಂ ನಿರ್ದೇಶಕರಾಗಿಯೂ ಕೆಲಸ ನಿರ್ವಹಿಸಿದ್ದು,ಪ್ರಸ್ತುತ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
ಕಿಶೋರ್ ಕುಮಾರ್ ಅವರ ಹೆಸರು ಕಳೆದ 2 ಅವಧಿಯಲ್ಲಿ ಪುತ್ತೂರು ಕ್ಷೇತ್ರದಿಂದ ಅಭ್ಯರ್ಥಿತನಕ್ಕೆ ಹೆಸರು ಕೇಳಿ ಬಂದಿತ್ತು.ಆದರೆ ಅವಕಾಶ ಸಿಕ್ಕಿರಲಿಲ್ಲ.ಆದರೂ ಅವರು ಪಕ್ಷಕ್ಕಾಗಿ ನಿಷ್ಠೆಯಿಂದ ಕೆಲಸ ಮಾಡಿದ್ದರು.ಇದೀಗ ಪಕ್ಷ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದೆ.