MUDA Scam: ಆಭರಣ ಕದ್ದ ಕಳ್ಳ ವಾಪಸ್ ಕೊಟ್ಟರೆ ಕೇಸ್ ಕ್ಲೋಸ್ ಆಗುತ್ತಾ: ಪ್ರತಾಪ್‌ ಸಿಂಹ

Share the Article

MUDA Scam: ಆಭರಣ ಕದ್ದ ಕಳ್ಳ ವಾಪಸ್ ಕೊಟ್ಟರೆ ಕೇಸ್ ಕ್ಲೋಸ್ ಆಗುತ್ತಾ? ಎಂದು ಪ್ರತಾಪ್‌ ಸಿಂಹ ಅವರು ವಿಚಿತ್ರವಾಗಿ ಪ್ರಶ್ನೆ ಮಾಡಿದ್ದಾರೆ. ಆದ್ರೆ ಇದರ ಹಿಂದೆ ಮುಡಾ ಪ್ರಕರಣ (MUDA Scam)ವಿಚಾರ ಇದೆ.

ಹೌದು, ಸಿದ್ದರಾಮಯ್ಯನವರ ಪತ್ನಿ 14 ಸೈಟ್‌ ಅನ್ನು ಮರಳಿ ಮುಡಾಕ್ಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ ಅವರು, ಅಧಿಕಾರದಲ್ಲಿ ಇದ್ದಾಗ ಕುಟುಂಬ, ಮಕ್ಕಳನ್ನು ಬೆಳೆಸಲು ಮುಂದಾದರೆ ಅವರು ನಿಮ್ಮ ಹೆಸರಿಗೆ ಕಳಂಕ ತರುತ್ತಾರೆ ಎಂಬುದಕ್ಕೆ ಇದು ಇನ್ನೊಂದು ಉದಾಹರಣೆ. ಇನ್ನು ಒಡವೆ ಕದ್ದ ಕಳ್ಳ ಒಡವೆ ವಾಪಸ್ ಕೊಟ್ಟರೆ ಕೇಸ್ ಮುಗಿಯುತ್ತಾ? ಇಲ್ಲ‌ ಅಲ್ವಾ? ಎಂದು ಪ್ರಶ್ನಿಸಿದರು.

ಎರಡೂವರೆ ತಿಂಗಳ ಹಿಂದೆಯೇ ನಾನು ಸಿಎಂಗೆ ನಿಮಗೆ ಬಂದ ಅಕ್ರಮ ಸೈಟ್ ವಾಪಸ್‌ ಕೊಟ್ಟು ಬಿಡಿ ಎಂದು ಹೇಳಿದ್ದೆ. ಸಿಎಂ ಅವರ ಇಷ್ಟು ವರ್ಷದ ರಾಜಕೀಯ ಜೀವನವನ್ನು 14 ಸೈಟ್ ನುಂಗಬಾರದು ಎಂದು ಅಂದೇ ಹೇಳಿದ್ದೆ. ಅವತ್ತು ನನ್ನ ಮಾತು ಕೇಳಿ, ಎರಡೂವರೆ ತಿಂಗಳ ಹಿಂದೆ ವಾಪಸ್ ಕೊಟ್ಟಿದ್ದರೆ ಇವತ್ತು ಪ್ರಾಸಿಕ್ಯೂಷನ್, ಕೇಸ್ ಏನೂ ಆಗುತ್ತಿರಲಿಲ್ಲ. ಕುರ್ಚಿಯೂ ಅಲುಗಾಡುತ್ತಿರಲಿಲ್ಲ ಎಂದರು.

ಈಗ ಸಿಎಂ ತಮ್ಮ ಸೈಟ್‌ಗೆ 64 ಕೋಟಿ ರೂ. ಕೇಳಿದ ದಿನವೇ ಸಿಎಂ ಮೇಲಿನ ಗೌರವ, ವಿಶ್ವಾಸ ನೆಲ ಕಚ್ಚಿತು. ಈಗ ಸಿಎಂ ಪತ್ನಿ ಸೈಟ್ ವಾಪಸ್ ಕೊಟ್ಟರೂ ಅಷ್ಟೇ. ಕೊಡದಿದ್ದರೂ ಅಷ್ಟೇ. ತನಿಖೆ ಆಗಲೇಬೇಕು ಎಂದು ಆಗ್ರಹಿಸಿದರು.

ಈಗ ಸಿಎಂ ಪತ್ನಿಯ ಭಾವನಾತ್ಮಕ ಕಾರ್ಡ್ ಕೆಲಸ ಮಾಡುವುದಿಲ್ಲ. ಪಾರ್ವತಮ್ಮ ಅವರಿಗೆ ತಮ್ಮ ಪತಿಯ ತಪಸ್ಸಿನ ರೀತಿಯ ರಾಜಕಾರಣಕ್ಕಿಂತಾ ಸೈಟ್ ಮುಖ್ಯವಾಗಿ ಇಷ್ಟು ದಿನ ಹಠ ಹಿಡಿದು ಕೂತಿದ್ದೆ ಬಹುದೊಡ್ಡ ತಪ್ಪು. ಈಗ ಸೈಟ್ ವಾಪಸ್ ಕೊಡುವುದಾಗಿದ್ದರೆ ಹೈಕೋರ್ಟ್‌ನಲ್ಲಿ ಹೋರಾಟ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿದರು. ಹೀಗೆಲ್ಲಾ ಮಾಡಿ ನಿಮ್ಮನ್ನು ತಪ್ಪನ್ನು ಮತ್ತಷ್ಟು ಎತ್ತಿ ಹಿಡಿದಿದೆ.

Leave A Reply