Religious Structures: ಇನ್ಮುಂದೆ ಇಂತಹ ಸ್ಥಳಗಳಲ್ಲಿ ಯಾವುದೇ ದೇಗುಲ, ದರ್ಗಾ ಇರುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ

Religious Structures: ಇನ್ಮುಂದೆ ರಸ್ತೆ, ಪಾದಚಾರಿ ಮಾರ್ಗ, ಜಲಮೂಲ ಅಥವಾ ರೈಲ್ವೆ ಹಳಿಯ ಬಳಿ ಸ್ಥಳದಲ್ಲಿ ಯಾವುದೇ ದೇಗುಲ, ದರ್ಗಾ ಇರುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಹೌದು, ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಧಾರ್ಮಿಕ ಒತ್ತುವರಿಗಳನ್ನು( Religious Structures) ಅನುಮತಿಸಬಾರದು ಮತ್ತು ಜನರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಅದಲ್ಲದೆ ಧಾರ್ಮಿಕ ಕಟ್ಟಡಗಳನ್ನು ಒಳಗೊಂಡಂತೆ ಎಲ್ಲಾ ರೀತಿಯ ಒತ್ತುವರಿಗಳನ್ನು ತೆರವು ಮಾಡಬೇಕು ಎಂದು ನ್ಯಾಯಾಲಯವು ಹೇಳಿದೆ.

ಕೋರ್ಟ್ ಪ್ರಕಾರ ಭಾರತ ಜಾತ್ಯತೀತ ದೇಶ. ಇಲ್ಲಿ ವಿವಿಧ ಸಂಸ್ಕೃತಿ ಆಚರಣೆಗಳು ಅಸ್ತಿತ್ವದಲ್ಲಿ ಇದೆ. ಹೀಗಾಗಿ ಇಂತಹ ಒತ್ತುವರಿಗಳನ್ನು ತೆರವುಗೊಳಿಸುವ ಸಂಬಂಧ ನೀಡುವ ಆದೇಶ ಯಾವುದೇ ಧರ್ಮ ಎಂದು ಪ್ರತ್ಯೇಕಿಸದೆ ಎಲ್ಲ ನಾಗರಿಕರಿಗೂ ಅನ್ವಯವಾಗುತ್ತದೆ ಎಂದು ತಿಳಿಸಿದೆ.

ನಿಯಮದಂತೆ ರಸ್ತೆ ಮಧ್ಯೆ ಯಾವುದೇ ಧಾರ್ಮಿಕ ಕಟ್ಟಡ ಇರಬಾರದು. ಅದು ಗುರುದ್ವಾರ ಅಥವಾ ದರ್ಗಾ ಅಥವಾ ದೇಗುಲವೇ ಆಗಿರಬಹುದು. ಇದರಿಂದ ಸಾರ್ವಜನಿಕ ಸಂಚಾರಕ್ಕೆ ಅಡ್ಡಿ ಮಾಡಬಾರದು. ಜನರ ಸುರಕ್ಷತೆಯೇ ಪರಮಶ್ರೇಷ್ಠ. ಹೀಗಾಗಿ ಈ ಒತ್ತುವರಿ ತೆರವು ಸಂಬಂಧ ಮಾರ್ಗಸೂಚಿ ಹೊರಡಿಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.

Leave A Reply

Your email address will not be published.