Pune: ಬೆಟ್ಟದಲ್ಲಿ ಹೋಗಿ ಬಿದ್ದ ಹೆಲಿಕಾಪ್ಟರ್‌; ಮೂರು ಮಂದಿ ದಾರುಣ ಸಾವು

Share the Article

Pune: ಮಹಾರಾಷ್ಟ್ರದ ಪುಣೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಮಂಗಳವಾರ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ವರದಿಯಾಗಿದೆ. ಇದರಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ. ಆದರೆ, ಹೆಲಿಕಾಪ್ಟರ್ ಖಾಸಗಿಯೇ ಅಥವಾ ಸರ್ಕಾರಿದ್ದೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಬೆಳಗ್ಗೆ 7 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.
ಎರಡು ಆಂಬುಲೆನ್ಸ್‌ಗಳು ಮತ್ತು ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿವೆ.

ಮಾಹಿತಿ ಪ್ರಕಾರ ದಟ್ಟವಾದ ಮಂಜು ಅವಘಡಕ್ಕೆ ಕಾರಣ ಎನ್ನಲಾಗುತ್ತಿದೆ. ಪಿಂಪ್ರಿ ಚಿಂಚ್ವಾಡ್ ಪೊಲೀಸ್ ಅಧಿಕಾರಿಯ ಪ್ರಕಾರ, ಪ್ರಸ್ತುತ ಅಪಘಾತದ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಬವಧಾನ್ ಪ್ರದೇಶದ ಬೆಟ್ಟದಲ್ಲಿ ಅಪಘಾತ ಸಂಭವಿಸಿದೆ ಬವ್ಧಾನ್ ಪ್ರದೇಶದ ಗುಡ್ಡಗಾಡು ಪ್ರದೇಶದಲ್ಲಿ ಬೆಳಗ್ಗೆ 6.45ಕ್ಕೆ ಈ ಘಟನೆ ನಡೆದಿದೆ ಎಂದು ಪಿಂಪ್ರಿ ಚಿಂಚ್‌ವಾಡ್ ಪೊಲೀಸರು ತಿಳಿಸಿದ್ದಾರೆ

ಹೆಲಿಕಾಪ್ಟರ್ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ
ಹಿಂಜೆವಾಡಿ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಕನ್ಹಯ್ಯಾ ಥೋರಟ್, “ಪುಣೆ ಜಿಲ್ಲೆಯ ಬವ್‌ಧಾನ್ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಇಬ್ಬರು ಸಾವನ್ನಪ್ಪಿದ್ದಾರೆ. ಇದು ಯಾರ ಹೆಲಿಕಾಪ್ಟರ್ ಎಂದು ಇನ್ನೂ ತಿಳಿದಿಲ್ಲ.

Leave A Reply

Your email address will not be published.