Belthangady: ಮರದಿಂದ ಕೆಳಗೆ ಬಿದ್ದು ವ್ಯಕ್ತಿ ಸಾವು

Belthangady: ಮರದಿಂದ ವ್ಯಕ್ತಿಯೊಬ್ಬರು ಬಿದ್ದು ಸಾವಿಗೀಡಾದ ಘಟನೆಯೊಂದು ಇಂದು (ಅ.4) ಪುದುವೆಟ್ಟು ಗ್ರಾಮದ ಮಿಯಾರ್ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್ (35) ಎಂದು ಗುರುತಿಸಲಾಗಿದೆ. ಕೂಲಿ ಕೆಲಸಕ್ಕೆಂದು ಮಿಯಾರ್ ಸಮೀಪ ಬಂದಿದ್ದು, ಸುಮಾರು 10 ಗಂಟೆಗೆ ಮರದ ರೆಂಬೆ ತೆಗೆಯುತ್ತಿದ್ದ ಸಂದರ್ಭದಲ್ಲಿ ಮರದಲ್ಲೇ ಅಸ್ವಸ್ಥರಾಗಿದ್ದು, ಕೆಳಗೆ ಬಿದ್ದಿದ್ದಾರೆ. ಕೂಡಲೇ ಅಲ್ಲಿದ್ದವರು ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಅಷ್ಟೊತ್ತಿಗೆ ಅವರು ಮೃತಪಟ್ಟಿದ್ದಾರೆ.