Chitradurga Murugha Shri: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾಶ್ರೀ ಬಿಡುಗಡೆಗೆ ಕೋರ್ಟ್‌ ಆದೇಶ

Share the Article

Chitradurga Murugha Shri: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀಗೆ ನ್ಯಾಯಾಲಯವು ಬಿಡುಗಡೆಗೆ ಆದೇಶ ಹೊರಡಿಸಿದೆ. ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದ್ದು, ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಕಾರಣ ಬಿಡುಗಡೆಗೆ ಆದೇಶ ಹೊರಡಿಸಿದೆ.

ಸಂತ್ರಸ್ತೆಯರಿಬ್ಬರು ಸೇರಿ 12 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದ್ದು ಮುರುಘಾಶ್ರೀ ಅವರಿಗೆ ಬಿಡುಗಡೆಗೆ ನ್ಯಾಯಾಲಯ ಆದೇಶ ನೀಡಿದೆ.

ಬಿಡುಗಡೆಗೊಂಡ ನಂತರ ಮುರುಘಾಶ್ರೀ ಅವರು ಚಿತ್ರದುರ್ಗದ ಜೈಲಿನಲ್ಲಿಂದ ದಾವಣಗೆರೆಗೆ ತೆರಳಲಿದ್ದಾರೆ.

Leave A Reply