Weather report: ಕರ್ನಾಟಕದ ಹವಾಮಾನ ಮುನ್ಸೂಚನೆ: 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣ
Weather report: ಕಾಸರಗೋಡು(Kasargodu) ಸೇರಿದಂತೆ ಕರ್ನಾಟಕದ(Karnataka) ಕರಾವಳಿ(Coastal) ಜೆಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ(Rain) ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ಮಧ್ಯ ಒಕ್ಟೊಬರ್ 9, 10 ರಂದು ಸ್ವಲ್ಪ ಕಡಿಮೆ ಇರಬಹುದು.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಕಾಣಿಸುತ್ತಿದೆ. ನಡುವೆ ಒಂದೆರಡು ದಿನ ಕಡಿಮೆ ಇರಬಹುದು.
ಒಳನಾಡು : ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಳನಾಡು ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಅರಬ್ಬಿ ಸಮುದ್ರದ ಹಾಗೂ ಬಂಗಾಳಕೊಲ್ಲಿಯಲ್ಲಿ ಗಾಳಿಯ ಬೀಸುವಿಕೆ ನಿಧಾನ ಗತಿಯಲ್ಲಿದೆ ಮತ್ತು ಹೆಚ್ಚೇನ ಒತ್ತಡವೂ ಇಲ್ಲದಿರುವುದರಿಂದ ತಮಿಳುನಾಡು ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ ಗಾಳಿ ಅಥವಾ ಮಾರತಗಳ ಚಲನೆಯ ದಿಕ್ಕು ನಿರ್ದಿಷ್ಟವಾಗಲ್ಲದಿರುವುದರಿಂದ ಕೆಲವು ಭಾಗಗಳಲ್ಲಿ ಮೇಘ ಸ್ಪೋಟದಂತಹ ಮಳೆಯಾಗುತ್ತಿದೆ.
ಈ ಅನಿಶ್ಚಿತತೆ ಹಿಂಗಾರು ಆರಂಭವಾಗುವ ತನಕವೂ ಮುಂದುವರಿಯುವ ಸಾಧ್ಯತೆ ಇದೆ.