Channapattana By Election: ರಾತ್ರೋರಾತ್ರಿ ಬಿಜೆಪಿಗೆ ಶಾಕ್ ಕೊಟ್ಟ ಎಚ್ ಡಿ ಕುಮಾರಸ್ವಾಮಿ !!

Share the Article

Channapattana By Election: ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗಾಗಿ ಇನ್ನೊಂದು ವಾರದಲ್ಲಿ ದಿನಾಂಕ ಘೋಷಣೆ ಆಗಲಿದೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಬೆನ್ನಲ್ಲೇ ಅವರು ಬಿಜೆಪಿಗೆ ದೊಡ್ಡ ಆಘಾತ ನೀಡಿದ್ದಾರೆ.

ಹೌದು, ಚನ್ನಪಟ್ಟಣ ಉಪ ಚುನಾವಣೆ (Channapattana By Election) ಕಾವು ಜೋರಾಗಿದ್ದು, ದೋಸ್ತಿಗಳ ಪೈಕಿ ಬಿಜೆಪಿಗೆ ಟಿಕೆಟ್ ಸಿಗಲಿದೆ ಎಂದು ಹೇಳಾಲಾಗಿತ್ತು. ಸಿ ಪಿ ಯೋಗೇಶ್ವರ್ ಹಾಗೂ ಪ್ರತಾಪ್ ಸಿಂಹ ಹೆಸರೂ ಕೇಳಿಬಂದಿತ್ತು. ಕುಮಾರಸ್ವಾಮಿ(HD Kumarswamy) ಕೂಡ ಇದಕ್ಕೆ ಓಕೆ ಅಂದಿದ್ದಾರೆ ಎನ್ನಲಾಗಿತ್ತು. ಆದರೀಗ ಇದರ ನಡುವೆಯೇ ಲೋಕಸಭೆ ಚುನಾವಣೆ ವೇಳೆ ಮಂಡ್ಯದಿಂದ ಸ್ಪರ್ಧಿಸುವ ಮೊದಲು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವ ಬಗ್ಗೆ ಯಾವುದೇ ಚರ್ಚೆ ಅಥವಾ ಒಪ್ಪಂದ ಆಗಿರಲಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಬಿಜೆಪಿ ಕ್ಷೇತ್ರವನ್ನು ಬಿಟ್ಟುಕೊಡಲು ಆಗದು ಎಂದು ಪರೋಕ್ಷವಾಗಿ ನುಡಿದಿದ್ದಾರೆ.

ಜೆಡಿಎಸ್ (JDS) ಕಾರ್ಯಕರ್ತರ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚುನಾವಣೆ ಸಮೀಪಿಸುತ್ತಿದೆ. ಯೋಗೇಶ್ವರ್ ಅವರಿಗೆ ಅಥವಾ ಇನ್ಯಾರಿಗೆ ಆಗಲಿ ಕ್ಷೇತ್ರವನ್ನು ಬಿಟ್ಟುಕೊಡಬೇಕೆಂದು ಬಿಜೆಪಿ (BJP) ವರಿಷ್ಠರ ಜೊತೆ ಒಪ್ಪಂದವಾಗಿರಲಿಲ್ಲ. ಅವತ್ತು ಏನು ನಡೆಯಿತು ಎಂದು ಹೇಳಲೇಬೇಕು. ಜನರಿಗೆ ಸತ್ಯ ಗೊತ್ತಾಗಬೇಕು ಎಂಬುದು ನನ್ನ ಉದ್ದೇಶ. ಬೆಂಗಳೂರು ಗ್ರಾಮಾಂತರ ಲೋಕಾಸಭೆ ಕ್ಷೇತ್ರದಿಂದ ಡಾ.ಸಿ.ಎನ್ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಯಾಗಲು ಕೇಂದ್ರದ ಗೃಹ ಸಚಿವರಾದ ಅಮಿತ್ ಶಾ ಅವರೇ ಮೂಲ ಕಾರಣ. ಅವರ ಒತ್ತಾಯಕ್ಕೆ ಗೌರವ ಕೊಟ್ಟು, ಅವರ ಮಾತಿಗೆ ತಲೆಬಾಗಿ ಅವರನ್ನು ಅಭ್ಯರ್ಥಿ ಮಾಡಲಾಯಿತು ಎಂದಿದ್ದಾರೆ.

ಅಲ್ಲದೆ ನಮ್ಮಲ್ಲಿನ ಕೆಲವೊಂದಷ್ಟು ತಿಕ್ಕಾಟಕ್ಕೆ ಸಂಘಟನೆ ಸ್ವಲ್ಪ ವೀಕ್ ಆಗಿದೆ. ಈಗ ಕಾರ್ಯಕರ್ತರು ಬಲಾಡ್ಯವಾಗಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಅದರಿಂದ ಅವರ ವಿಶ್ವಾಸ ಇಲ್ಲದೇ ಏನು ತೀರ್ಮಾನ ಮಾಡಲ್ಲ. ಅವರ ಪಕ್ಷದಲ್ಲಿ ಅವರು ಏನೇ ಚರ್ಚೆ ಮಾಡಿಕೊಂಡರೂ ಅದು ಅವರ ಸಂಘಟನೆ ವಿಚಾರ. ಅದನ್ನ ತಪ್ಪು ಅಂತ ನಾವು ಹೇಳುವುದಿಲ್ಲ ಎಂದಿದ್ದಾರೆ.

ಬಳಿಕ ಮಾತನಾಡಿದ ಅವರು ಚನ್ನಪಟ್ಟಣ ಜೆಡಿಎಸ್ ಭದ್ರಕೋಟೆಯಾಗಿದೆ. ಕಾರ್ಯಕರ್ತರ ಅಭಿಪ್ರಾಯದಂತೆ ನಾನು ನಿರ್ಧಾರ ಕೈಗೊಳ್ಳಬೇಕಿದೆ. ಏಕೆಂದರೆ ಕಾರ್ಯಕರ್ತರು ಪಕ್ಷವನ್ನು ಬಲಿಷ್ಠವಾಗಿ ಸಂಘಟನೆ ಮಾಡಿಕೊಂಡಿದ್ದಾರೆ. ಅವರ ಅಭಿಪ್ರಾಯಕ್ಕೆ ವಿರುದ್ಧವಾಗಿ ನಾನು ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

Leave A Reply

Your email address will not be published.