Air India: ವಿಮಾನದಲ್ಲಿ ತಾಂತ್ರಿಕ ದೋಷ; ವಾಯುಮಾರ್ಗದಲ್ಲೇ ಎಮರ್ಜೆನ್ಸಿ ಘೋಷಣೆ ಮಾಡಿದ ಏರ್‌ಇಂಡಿಯಾ

Share the Article

Air India: ವಾಯು ಮಾರ್ಗದಲ್ಲಿಯೇ ಏರ್‌ಇಂಡಿಯಾ ವಿಮಾನವೊಂದು ಇಂದು (ಶುಕ್ರವಾರ) ಸಂಜೆ ತಿರುಚಿರಾಪಳ್ಳಿಯಲ್ಲಿ ಹೈಡ್ರಾಲಿಕ್‌ ವೈಫಲ್ಯದಿಂದಾಗಿ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಿದ್ದು, ತಮಿಳುನಾಡಿನ ತಿರುಚ್ಚಿಯಿಂದ ಶಾರ್ಜಾಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ಗೆ ತೊಂದರೆಯಾಯಿತು. ಸುಮಾರು ಎರಡೂವರೆ ಗಂಟೆಗಳ ಕಾಲ ವಿಮಾನ ಗಾಳಿಯಲ್ಲಿ ಸುತ್ತುತ್ತಲೇ ಇತ್ತು. ಸಾಕಷ್ಟು ಪ್ರಯತ್ನಗಳ ನಂತರ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡಿಂಗ್‌ ಮಾಡಲಾಗಿದೆ.

ತಮಿಳುನಾಡಿನ ತಿರುಚ್ಚಿಯಿಂದ ಶಾರ್ಜಾಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿತ್ತು. ಇದರಿಂದಾಗಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ಗೆ ತೊಂದರೆಯಾಗಿ, ವಿಮಾನವು ಗಾಳಿಯಲ್ಲಿ ಸುತ್ತುತ್ತಿತ್ತು.

ವಿಮಾನದ ಹೈಡ್ರಾಲಿಕ್ ವ್ಯವಸ್ಥೆಯಲ್ಲಿ ದೋಷ ಕಂಡುಬಂದಿದೆ ಎಂದು ತಿರುಚ್ಚಿ ವಿಮಾನ ನಿಲ್ದಾಣದ ನಿರ್ದೇಶಕ ಗೋಪಾಲಕೃಷ್ಣನ್ ತಿಳಿಸಿದ್ದಾರೆ. ಇದರಿಂದಾಗಿ ವಿಮಾನ ನಿಲ್ದಾಣದಲ್ಲಿ ಇಳಿಯಲು ಸಾಧ್ಯವಾಗುತ್ತಿಲ್ಲ. ಭದ್ರತೆಯ ದೃಷ್ಟಿಯಿಂದ ವಿಮಾನ ನಿಲ್ದಾಣದಲ್ಲಿ 20ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳು ಮತ್ತು ಅಗ್ನಿಶಾಮಕ ದಳಗಳನ್ನು ನಿಯೋಜಿಸಲಾಗಿದೆ.

ಏರ್‌ಪೋರ್ಟ್ ಮ್ಯಾನೇಜ್‌ಮೆಂಟ್ ಪ್ರಕಾರ, ಏರ್ ಇಂಡಿಯಾ ವಿಮಾನ AXB613 140 ಪ್ರಯಾಣಿಕರೊಂದಿಗೆ ತಿರುಚ್ಚಿಯಿಂದ ಶಾರ್ಜಾಕ್ಕೆ ಹೋಗುತ್ತಿತ್ತು. ವಿಮಾನ ನಿಲ್ದಾಣದಿಂದ ಟೇಕಾಫ್ ಆದ ನಂತರ ವಿಮಾನದ ಹೈಡ್ರಾಲಿಕ್ ವ್ಯವಸ್ಥೆಯಲ್ಲಿ ದೋಷ ಕಂಡುಬಂದಿದೆ. ಇದಾದ ಬಳಿಕ ಪೈಲಟ್ ತುರ್ತು ಪರಿಸ್ಥಿತಿ ಘೋಷಿಸಿ ವಿಮಾನ ನಿಲ್ದಾಣದ ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದಾರೆ.

ವಿಮಾನ ಲ್ಯಾಂಡಿಂಗ್ ನಲ್ಲಿ ಸಮಸ್ಯೆ ಉಂಟಾಗಿದೆ ಎಂದು ವಿಮಾನ ನಿಲ್ದಾಣದ ಆಡಳಿತ ಮಂಡಳಿ ತಿಳಿಸಿದೆ. ಇಂಧನವನ್ನು ಕಡಿಮೆ ಮಾಡಲು, ವಿಮಾನವನ್ನು ಗಾಳಿಯಲ್ಲಿ ಸುತ್ತು ಹೊಡೆಸಲಾಗುತ್ತಿದ್ದು, ವಿಮಾನ ನಿಲ್ದಾಣದ ಮೇಲೆಯೇ ವಿಮಾನ ಸುತ್ತುತ್ತಿದೆ. ಸ್ಥಳೀಯ ಸುದ್ದಿ ವರದಿಗಳ ಪ್ರಕಾರ, ವಿಮಾನವು 4,255 ಅಡಿ ಎತ್ತರದಲ್ಲಿ ಹಾರುತ್ತಿತ್ತು. ತುರ್ತು ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಂಬ್ಯುಲೆನ್ಸ್ ಮತ್ತು ಅಗ್ನಿಶಾಮಕ ದಳವನ್ನು ವಿಮಾನ ನಿಲ್ದಾಣಕ್ಕೆ ಕರೆಸಲಾಗಿ ಮುನ್ನೆಚ್ಚರಿಕೆ ವಹಿಸಲಾಗಿದೆ.

Leave A Reply