Devaragudda Karnika: ಐತಿಹಾಸಿಕ ದೇವರಗುಡ್ಡ ಗೊರವಯ್ಯ ಕಾರ್ಣಿಕ ನುಡಿ; ಭವಿಷ್ಯವಾಣಿಯಲ್ಲಿ ಏನಿದೆ?
Devaragudda Karnika: ಪ್ರತಿ ವರ್ಷದಂತೆ ಈ ವರ್ಷ ಕೂಡಾ ಹಾವೇರಿ ಜಿಲ್ಲೆಯ ರಾಣೆ ಬೆನ್ನೂರು ತಾಲೂಕಿನ ಶ್ರೀ ಕ್ಷೇತ್ರ ದೇವರಗುಡ್ಡದ ಮಾಲತೇಶಸ್ವಾಮಿ ದೇವಸ್ಥಾನದಲ್ಲಿ ನಡೆಯುವ ಕಾರ್ಣಿಕೋತ್ಸವದಲ್ಲಿ ಗೊರವಪ್ಪ ಭವಿಷ್ಯವಾಣಿ ನುಡಿದಿದ್ದಾರೆ.
“ಆಕಾಶನ ಚಿಗುರೀತಲೇ ಬೇರೆಲ್ಲಾ ಮುತ್ತಾಯಿತಲೇ ಪರಾಕ್” ಎಂದು ನುಡಿದಿದ್ದಾರೆ.
ಆಕಾಶದತ್ತ ಚಿಗುರಿತಲೆ ಎಂದರೆ ಒಳ್ಳೆ ಮಳೆ ಆಗುತ್ತೆ, ಬೇರೆಲ್ಲ ಮುದ್ದಾಯಿತಲೇ ಅಂದರೆ ರೈತರಿಗೆ ಒಳ್ಳೆ ಬೆಳೆ ಬರುತ್ತೆ ಎಂದು ಅರ್ಥ. ರಾಜಕೀಯವಾಗಿ ಹೇಳುವುದಾದರೆ ಆಕಾಶದತ್ತ ಚಿಗುರಿತಲೇ ಎಂದರೆ, ಈಗಿರುವ ನಾಯಕತ್ವ ಆಕಾಶದತ್ತ ಚಿಗುರಿಬಿಟ್ಟಿದೆ. ಬೇರೆಲ್ಲಾ ಮುದ್ದಾಯಿತಲೇ ಎಂದರೆ ಅವರಿಗೆಲ್ಲ ಬೆನ್ನೆಲುಬಾಗಿ ನಿಂತಿರೋದು ನೀವೆಲ್ಲಾ ನೋಡಿಬಹುದು. ಕಾನೂನು ವ್ಯವಸ್ಥೆಯಲ್ಲಿ ಏನು ಬದಲಾವಣೆ ಆದರೂ ನಾಯಕತ್ವ ಈಗ ಹೇಗಿದೆಯೋ ಹಾಗೆ ಅವರು ಒಪ್ಪಿಕೊಳ್ತಾರೆ. ಆಕಾಶದತ್ತ ಚಿಗುರಿರೋ ಗಿಡ ಹೇಳಿದಂತೆ ಬೇರುಗಳು ಒಪ್ಪಿಕೊಳ್ಳುತ್ತವೆ ಎಂದು ವಿಶ್ಲೇಷಣೆ ಮಾಡಬಹುದು ಎಂದು ದೇವರಗುಡ್ದದ ಮಾಲತೇಶ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾದ ಸಂತೋಷ್ ಭಟ್ ಗುರೂಜಿ ಮಾಧ್ಯಮದ ಮುಂದೆ ಕಾರ್ಣಿಕ ಕುರಿತು ಹೇಳಿದರು.