Weather report: ಕರ್ನಾಟಕದ ಹವಾಮಾನ ವರದಿ: ಮಳೆ ಕೊಂಚ ತಗ್ಗುವ ಸಾಧ್ಯತೆ
Weather report: ಕಾಸರಗೋಡು(Kasaragodu), ದಕ್ಷಿಣ ಕನ್ನಡ(Dakshina Kannada) ಹಾಗೂ ಉಡುಪಿ(Udupi) ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬೆಳಿಗ್ಗೆಯಿಂದಲೇ ಬಿಟ್ಟು ಬಿಟ್ಟು ತುಂತುರು ಮಳೆ(Rain) ಹಾಗೂ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಮಳೆ ಸ್ವಲ್ಪ ಜಾಸ್ತಿಯಾಗುವ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿಗೆ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಒಕ್ಟೊಬರ್ 16ರಂದು ಉತ್ತಮ ಮಳೆಯ ಸಾಧ್ಯತೆ ಇದ್ದು, ನಂತರ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಮಳೆ ಮುಂದುವರಿಯುವ ಲಕ್ಷಣಗಳಿವೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಅಕ್ಟೊಬರ್ 20ರಿಂದ ಹಿಂಗಾರು ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಬಹುತೇಕ ಭಾಗಗಳಲ್ಲಿ ಬೆಳಿಗ್ಗೆಯಿಂದ ತುಂತುರು ಮಳೆ ಇದ್ದರೆ ಮಧ್ಯಾಹ್ನ ನಂತರ, ಸಂಜೆಯಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 16ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯ ಲಕ್ಷಣಗಳಿದ್ಧರೆ, ಚಿಕ್ಕಮಗಳೂರು, ಹಾಸನ, ಕೊಡಗು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 17ರಿಂದ ಕಡಿಮೆಯಾಗುವ ಮಳೆಯು ಒಕ್ಟೊಬರ್ 20ರಿಂದ ಹಿಂಗಾರು ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ದಾವಣಗೆರೆ ಜಿಲ್ಲೆಯಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ನಿರಂತರ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 16ರಂದು ಮೈಸೂರು, ಚಾಮರಾಜನಗರ ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. 17ರಿಂದ ಕಡಿಮೆಯಾದರೂ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಕ್ಟೊಬರ್ 18ರಂದು ತಮಿಳುನಾಡು ಕರಾವಳಿಯಲ್ಲಿ ಶಿಥಿಲಗೊಳ್ಳುವ ಸಾಧ್ಯತೆಗಳಿವೆ. ಇದೇ ಸಮಯದಲ್ಲಿ ಅರಬ್ಬಿ ಸಮುದ್ರದ ಉತ್ತರ ಕೇರಳ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಅಕ್ಟೋಬರ್ 20ರ ನಂತರ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.
4q6goi