By Election: ಚನ್ನಪಟ್ಟಣಕ್ಕೆ ಇವರೇ ಕಾಂಗ್ರೆಸ್ ಅಭ್ಯರ್ಥಿ – ಶಾಸಕ ಪ್ರದೀಪ್ ಈಶ್ವರ್ ನಿಂದ ಹೆಸರು ಘೋಷಣೆ!!

Share the Article

By Election: ಚನ್ನಪಟ್ಟಣ ಸೇರಿದಂತೆ ಕರ್ನಾಟಕದ ಮೂರು ಕ್ಷೇತ್ರದ ಉಪಚುನಾವಣೆಗೆ(By Election) ಮುಹೂರ್ತ ಫಿಕ್ಸ್‌ ಆಗಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಸರತ್ತು ನಡೆಸುತ್ತಿದೆ. ಆದರೆ ಅಚ್ಚರಿ ಎಂಬಂತೆ ಈ ನಡುವೆಯೇ ಶಾಸಕ ಪ್ರದೀಪ್ ಈಶ್ವರ್ ಅವರು ಚನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆಮಾಡಿದ್ದಾರೆ.

ಹೌದು, ಚನ್ನಪಟ್ಟಣ ಉಪಚುನಾವಣೆಯಲ್ಲಿ ನಮ್ಮ ಪಕ್ಷದಿಂದ ಡಿಕೆ ಸುರೇಶ್‌(DK Suresh) ಅವರೇ ಅಧಿಕೃತ ಅಭ್ಯರ್ಥಿಯಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಯಾರು ಅಂತ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಿಲ್ಲ ಅದರೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮಾತ್ರ ಡಿಕೆ ಸುರೇಶ್ ಅವರೇ ಸ್ಪರ್ಧಿಸಲಿ ಎನ್ನುತ್ತಿದ್ದಾರೆ. ಸುರೇಶ್ ಸ್ಪರ್ಧಿಸಿದರೆ ತಾನು ಮನೆ ಮನೆಗೆ ತೆರಳಿ ಅವರ ಪರ ಪ್ರಚಾರ ಮಾಡುವುದಾಗಿ ಶಾಸಕ ಹೇಳುತ್ತಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನನಗೂ ಚನ್ನಪಟ್ಟಣ ಉಪಚುನಾವಣೆ ಉಸ್ತುವಾರಿ ಕೊಟ್ಟಿದ್ದಾರೆ. ಡಿಕೆ ಸುರೇಶಣ್ಣ ನಮ್ಮ ಜೊತೆ ವಿಧಾನಸೌಧಕ್ಕೆ ಬರುತ್ತಾರೆ ಎಂಬ ವಿಶ್ವಾಸವಿದೆ. ಅವರೇ ಅಭ್ಯರ್ಥಿಯಾದರೆ ಸೂಕ್ತ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

Leave A Reply

Your email address will not be published.