Milk Price Hike: ರಾಜ್ಯದ ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ: ಸದ್ಯದಲ್ಲೇ ಹಾಲು ಖರೀದಿ ದರ ಹೆಚ್ಚಳ! ಗ್ರಾಹಕರಿಗೆ ಬರೆ ಸಾಧ್ಯತೆ

Milk Price Hike: ರಾಜ್ಯ ಸರ್ಕಾರ(State Govt) ಗ್ರಾಹಕರು ಖರೀದಿಸುವ ಹಾಲಿನ ದರ ಏರಿಸಿ(Milk Price), ರೈತರಿಂದ(Farmer) ಖರೀದಿಸುವ ಹಾಲಿನ ದರವನ್ನು ಏರಿಕೆ ಮಾಡದೆ ಹಾಗೆ ಉಳಿಸಿಕೊಂಡಿತ್ತು. ಇದೀಗ ಶೀಘ್ರದಲ್ಲೇ ರೈತರಿಂದ ಖರೀದಿಸುವ ಹಾಲಿನ ದರ ಲೀಟರ್ ಗೆ 5 ರೂಗೆ ಏರಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಪಶುಸಂಗೋಪನಾ ಸಚಿವ(Minister of Animal Husbandry) ಕೆ ವೆಂಕಟೇಶ್ ಮಾಹಿತಿ ನೀಡಿದ್ದಾರೆ. ಸಚಿವರು ಚಾಮರಾಜನಗರದಲ್ಲಿ ಮಾತನಾಡಿ, ಹಾಲಿನ ದರ ಲೀಟರ್ ಗೆ 5 ರೂ ಏರಿಕೆ ಮಾಡುವಂತೆ ರೈತರು ಒತ್ತಾಯಿಸುತ್ತಿದ್ದಾರೆ. ಹಾಗಾಗಿ ಅವರ ಮನವಿಗೆ ಸ್ಪಂದಿಸಿ ರೈತರಿಂದ ಖರೀದಿಸುವ ಹಾಲಿನ ದರವನ್ನು 5 ರೂ ಹೆಚ್ಚಳ ಮಾಡಲು ನಿರ್ಧರಿಸಿಲಾಗಿದೆ ಎಂದು ತಿಳಿಸಿದರು.

ಹೆಚ್ಚಳ ಮಾಡಲು ನಿರ್ಧರಿಸಿರುವ ದರ 5 ರೂಪಾಯಿ ಪೂರ್ತಿಯಾಗಿ ಹಾಲು ಉತ್ಪಾದಕರಿಗೇ ಸಿಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನಾ ಸಚಿವ ಕೆ ವೆಂಟಕೇಶ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ದರ ಏರಿಸಲು ಸಿಎಂ ಸಿದ್ದರಾಮಯ್ಯ ಕೂಡ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಶೀಘ್ರದಲ್ಲೇ ಬೆಲೆ ಹೆಚ್ಚಳ ಮಾಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದರು.

ಗ್ರಾಹಕರಿಗೆ ಮತ್ತೆ ಹಾಲಿನ ದರ ಏರಿಕೆ ಬರೆ ಸಾಧ್ಯತೆ

ರಾಜ್ಯ ಸರ್ಕಾರ ಮತ್ತೊಮ್ಮೆ ಹಾಲಿನ ದರ ಹೆಚ್ಚಳ ಮಾಡಲು ನಿರ್ಧರಿಸಿದ್ದು, ಶೀಘ್ರವೇ ಸಭೆ ಕರೆಯಲು ನಿರ್ಧರಿಸಿದೆ. ಈ ಬಾರಿ ಹೆಚ್ಚಳ ಮಾಡಿದ ದರವನ್ನು ಪೂರ್ತಿಯಾಗಿ ರೈತರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಕಳೆದ ಬಾರಿ ಜೂನ್ ನಲ್ಲಿ ಪ್ಯಾಕೆಟ್ ಹಾಲಿನ ಪ್ರಮಾಣ ಹೆಚ್ಚಿಸಿ ಪ್ರತಿ ಲೀಟರ್ ಹಾಲಿನ ದರ ಎರಡು ರೂಪಾಯಿಯಷ್ಟು ಹೆಚ್ಚಳ ಮಾಡಲಾಗಿತ್ತು. ಈಗ ಮತ್ತೊಮ್ಮೆ ಹಾಲಿನ ದರ ಏರಿಕೆಯಾಗುವ ಎಲ್ಲಾ ಲಕ್ಷಣಗಳಿದ್ದು ಗ್ರಾಹಕರ ಜೇಬಿಗೆ ಕತ್ತರಿ ಬೀಳೋದು ಪಕ್ಕಾ..

Leave A Reply

Your email address will not be published.