BBK 11: ಬಿಗ್‌ಬಾಸ್‌ ಮನೆಯಿಂದ ಎಲಿಮಿನೇಟ್‌ ಆದ ಜಗದೀಶ್‌; ಹೊರ ಬಂದು ಸಂದೇಶ ರವಾನೆ

Share the Article

BBK 11: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಗಳ ಮೇಲೆ ಜಗಳವಾಡಿ, ಏಕವಚನ ಉಪಯೋಗಿಸಿ, ಬಿಗ್‌ಬಾಸ್‌ ಮನೆಯ ಮಹಿಳಾ ಸದಸ್ಯರಿಗೆ ನಿಂದಿಸಿ ಜಗಳಕ್ಕೆ ಕಾರಣವಾಗಿದ್ದ ಲಾಯರ್‌ ಜಗದೀಶ್‌ ದೊಡ್ಮನೆಯಿಂದ ಎಲಿಮಿನೇಟ್‌ ಆಗಿದ್ದಾರೆ. ಇವರ ಜೊತೆಗೆ ಜಗದೀಶ್‌ ಮೇಲೆ ಕೈ ಮಾಡಿದ ಕಾರಣಕ್ಕೆ ರಂಜಿತ್‌ರನ್ನೂ ಕೂಡಾ ಬಿಗ್‌ಬಾಸ್‌ ಮನೆಯಿಂದ ಹೊರಗೆ ಕಳಿಸಲಾಗಿದೆ.

ಬಿಗ್‌ಬಾಸ್‌ ಮನೆಯಿಂದ ಹೊರಗೆ ಬಂದಿರುವ ಜಗದೀಶ್‌ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿದ್ದಾರೆ. ಕೆಲವೊಂದು ಮಾಧ್ಯಮ ಪ್ರತಿನಿಧಿಗಳಿಗೆ ಸಂದೇಶ ರವಾನಿಸಿರುವ ಕುರಿತು ಟಿವಿ9 ವರದಿ ಮಾಡಿದೆ.

ಅದರ ಪ್ರಕಾರ, ನೂರಾರು ಕ್ಯಾಮೆರಾ, ಸಾವಿರಾರು ಬಿಗ್​ಬಾಸ್​ ಸಿಬ್ಬಂದಿ, ಆ ನಿರ್ದೇಶಕ, ಆ ಮಾಂತ್ರಿಕ ತಂತ್ರಜ್ಞರು, ಅವರ 24/7 ಡೆಡಿಕೇಷನ್ ಹಾಗೂ 20 ಕೋಟಿಗೂ ಹೆಚ್ಚಿನ ಬಿಗ್​ಬಾಸ್ ಅಭಿಮಾನಿ ದೇವರುಗಳ ಆಶೀರ್ವಾದ ಈ ಹೊಸ ಕರ್ನಾಟಕ ಕ್ರಶ್ ಲಾಯರ್ ಜಗದೀಶ್ ಆಗಿದ್ದಾನೆ’ ಎಂದಿದ್ದಾರೆ. ಮುಂದುವರೆದು, ‘ನಿಮ್ಮ ಪ್ರತಿ ಒಂದು ಚಪ್ಪಾಳೆ, ಸಂದೇಶ, ನಿಮ್ಮ ಆಶೀರ್ವಾದ ನನ್ನ ಈ ಬಿಗ್​ಬಾಸ್ ಪಯಣ ಯಶಸ್ಸು, ಅದು ನೀವು ಇಟ್ಟ ಈ ನಂಬಿಕೆ. ಮತ್ತೊಮ್ಮೆ ಕೋಟಿ ಕೋಟಿ ನಮನ. ಸಾರ್ಥಕ ಆಯಿತು, ನನ್ನ ಈ ಹುಟ್ಟು, ಈ ಪ್ರೀತಿ, ನನ್ನ ಗೆಲುವಿಗೆ ನೀವು ಕೊಟ್ಟ ಆ ಒಡನಾಟ, ನನ್ನ ಬಳಿ ಪದಗಳು ಕಡಿಮೆ, ವಿಶ್ಲೇಷಣೆ ಮಾಡಲು’ ಎಂದು ಬಿಗ್​ಬಾಸ್​ ಕಾರ್ಯಕ್ರಮವನ್ನು ಹೊಗಳಿದ್ದಾರೆ ಎಂದು ವರದಿಯಾಗಿದೆ.

 

Leave A Reply