Belthangady: ಬೆಳ್ತಂಗಡಿಯಲ್ಲಿ ಕಾಲೇಜು ಹುಡುಗಿಗೆ ಕಿರುಕುಳ – ಫೋಕ್ಸೋ ಪ್ರಕರಣ ದಾಖಲು

Belthangady: ಅಪ್ರಾಪ್ತ ವಯಸ್ಸಿನ ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕೊಂಡು ಬಂದು ದೂರವಾಣಿ ಸಂಖ್ಯೆ ಕೇಳುವ ಮೂಲಕ ಆಕೆಗೆ ಕಿರುಕುಳ ನೀಡಿದ ಪ್ರಕರಣ ದ.ಕ ಜಿಲ್ಲೆಯ ಬೆಳ್ತಂಗಡಿ(Belthangady) ತಾಲ್ಲೂಕಿನಲ್ಲಿ ನಡೆದಿದೆ. ವಿಚಾರವಾಗಿ ಆರೋಪಿಯ ವಿರುದ್ಧ ವೇಣೂರು ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಅಂದಹಾಗೆ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ(Kukkedi) ಗ್ರಾಮದ ಪುಲ್ಲಾಯಿ ಎನ್ನುವಲ್ಲಿ ಈ ಘಟನೆ ನಡೆದಿದ್ದು, ಬಂಟ್ವಾಳ(Bantwala) ತಾಲೂಕಿನ ಸಜೀಪನಡು ಗ್ರಾಮದ ನಿವಾಸಿ, ಹುಲ್ಲು ಕಟಾವು ಯಂತ್ರದ ಮೆಕ್ಯಾನಿಕ್‌ ಆಗಿರುವ ಜುಮಾರ್‌ (24) ಆರೋಪಿ. ಬಾಲಕಿಯು ತನ್ನ ಸಂಬಂಧಿ ಹಾಗೂ ನೆರೆಯ ವಿದ್ಯಾರ್ಥಿನಿಯೊಂದಿಗೆ ಕಾಲೇಜಿಗೆ ಹೋಗುತ್ತಿರುವ ವೇಳೆ ಕಳೆದ ಐದು ದಿನಗಳಿಂದ ಆರೋಪಿಯು ಬೈಕಿನಲ್ಲಿ ಹಿಂಬಾಲಿಸಿಕೊಂಡು ಬರುತ್ತಿದ್ದ ಎಂದು ತಿಳಿದುಬಂದಿದೆ. ಮಾತ್ರವಲ್ಲದೆ ಬೈಕ್‌ ನಿಲ್ಲಿಸಿ ಬೈಕ್‌ನಲ್ಲಿ ಬರುತ್ತೀರಾ, ನಿಮ್ಮ ಫೋನ್‌ ನಂಬರ್‌ ಕೊಡಿ ಎಂದು ಕೇಳುತ್ತಿದ್ದ.

ಅಂತೆಯೇ ಅ. 15ರಂದು ಬೆಳಗ್ಗೆ 7.45 ಗಂಟೆಗೆ ಎಂದಿನಂತೆ ಕಾಲೇಜಿಗೆ ಹೋಗುತ್ತಿದ್ದ ವೇಳೆ ಅತ ಬೈಕ್‌ ಅನ್ನು ಚಲಾಯಿಸಿಕೊಂಡು ಮುಂದಕ್ಕೆ ಹೋಗಿ ವಾಪಸು ಹಿಂದಕ್ಕೆ ತಿರುಗಿಸಿಕೊಂಡು ಬಂದು ತೊಂದರೆ ನೀಡಿದ್ದಾಗಿ ಆರೋಪಿಸಲಾಗಿದೆ. ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ವೇಣೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave A Reply

Your email address will not be published.