Weather Report: ಕರ್ನಾಟಕ ಹವಾಮಾನ ವರದಿ: ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ ಸಾಧ್ಯತೆ!
Weather Report: ರಾಜ್ಯದಲ್ಲಿ(Karnataka) ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ(Heavy rain) ಆಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ(IMD) ಹಲವು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್(Yellow Alert) ಘೋಷಿಸಿದೆ. ಕರಾವಳಿ(Coastal) ಹಾಗೂ ಒಳನಾಡಿನ ಹಲವೆಡೆ ಇಂದು ಸಾಧಾರಣ ಮಳೆ ಸಾಧ್ಯತೆ ಇದೆ.
ನಾಳೆ ಮತ್ತಷ್ಟು ಮಳೆ ಜಾಸ್ತಿ ಆಗುವ ಸಾಧ್ಯತೆಯಿದ್ದು, ಬೆಳಗಾವಿ, ಧಾರವಾಡ. ಗದಗ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಣೆ ಮಾಡುವ ಸಾಧ್ಯತೆ ಇದೆ. ಈ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಲಕ್ಷಣವಿದೆ. ಕರಾವಳಿಯಲ್ಲಿ ಪ್ರತಿ ಗಂಟೆಗೆ 35 ರಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಚಂಡಮಾರುತದ(Dipression) ವಾತಾವರಣ ಇರಲಿದೆ.
ಹಿನ್ನೆಲೆ ಮೀನುಗಾರರು ಎಚ್ಚರವಹಿಸಲು ಸೂಚನೆ ನೀಡಲಾಗಿದ್ದು, ಸೋಮವಾರ ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ 13 ಜಿಲ್ಲೆಗಳಿಗೆ ಇಲಾಖೆಯು ‘ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ.
ಬೆಂಗಳೂರಿನಲ್ಲಿ ಎರಡು ದಿನಗಳು ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.