DK Shivakumar: ಆದಾಯ ಮೀರಿ‌ ಆಸ್ತಿ ಗಳಿಕೆ ಪ್ರಕರಣ: ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ, ಸುಪ್ರೀಂ ಕೋರ್ಟ್ ಗೆ ದೂರು !

Share the Article

DK Shivakumar: ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್​ (DK Shivakumar) ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಕಾನೂನು ಸಂಕಷ್ಟಕ್ಕೆ ಸಿಲುಕುವುದು ಖಚಿತವಾಗಿದೆ. ಇದೀಗ ಈ ಪ್ರಕರಣ ಸಂಬಂಧ ಇದೀಗ ಸಿಬಿಐ ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಅಲ್ಲದೇ ಇದೇ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಯತ್ನಾಳ್ ಬೆನ್ನಲ್ಲೆ ಸಿಬಿಐ ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಹೌದು, ಈಗಾಗಲೇ ಸಿಬಿಐ ತನಿಖೆಗೆ ನೀಡಿದ ಸಮ್ಮತಿಯನ್ನು ಸರ್ಕಾರ ಹಿಂಪಡೆದುಕೊಂಡಿತ್ತು. ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರು ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ‘ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ಮಾಹಿತಿ ಪ್ರಕಾರ, ದೆಹಲಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಡಿಕೆಶಿಗೆ ಸೇರಿದ ಆಸ್ತಿಗಳಲ್ಲಿ 2017ರ ಆಗಸ್ಟ್ 2ರಂದು ಆದಾಯ ತೆರಿಗೆ ಇಲಾಖೆ ಶೋಧ ನಡೆಸಿತ್ತು. ಈ ವೇಳೆ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ನಂತರ ಜಾರಿ ನಿರ್ದೇಶನಾಲಯ ಡಿಕಿಶಿ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಡಿಕೆಶಿ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಸಿಎಂ ಸಚಿವ ಸಂಪುಟ ಹಿಂಪಡೆದಿತ್ತು ಎನ್ನಲಾಗಿದೆ.

Leave A Reply

Your email address will not be published.