Flood effect: ರಾಜ್ಯದಲ್ಲಿ ಮಳೆ ಅನಾಹುತ: ವರದಿ ತರಿಸಿಕೊಂಡಿದ್ದೇವೆ: ಶೀಘ್ರದಲ್ಲೆ ಪರಿಹಾರ ನೀಡಲು ಸಿದ್ಧತೆ – ಸಿಎಂ

Flood effect: ಮುಂಗಾರು ಮಳೆ(Monsoon Rain) ಈ ಬಾರಿ ರಾಜ್ಯದಲ್ಲಿ ಸಮೃದ್ಧವಾಗಿ ಆಗಿದೆ. ತದ ನಂತರದಲ್ಲಿ ಕಡಿಮೆಯಾಗಬೇಕಾದ ಮಳೆ(Rain) ಮತ್ತೆ ಮತ್ತೆ ಆಗಮಿಸಲಾರಂಭಿಸಿದೆ. ಇದರಿಂದ ರೈತರು(Farmer) ಬೆಳೆದ ಬೆಳೆ(Crop) ನಾಶವಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ(CM Siddaramaiah) ಮಾತನಾಡಿದ್ದು, ಪ್ರಕೃತಿ ವಿಕೋಪದಿಂದ(Natural Disaster) ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ(compensation) ನೀಡುತ್ತೇವೆ. ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಮೈಸೂರಿನಲ್ಲಿ ಮಾಹಿತಿ ನೀಡಿದರು.

ಮಳೆ ಅನಾಹುತಗಳ ಕುರಿತು ನಿಗಾ ವಹಿಸಿದ್ದೇವೆ. ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಅಧಿಕಾರಿಗಳಿಂದ ಸ್ಥಳ ಸಮೀಕ್ಷೆ ಕೂಡ ನಡೆಯುತ್ತಿದೆ. ವರದಿ ಬಂದ ಕೂಡಲೇ ಅದಕ್ಕೆ ತಕ್ಕ ಪರಿಹಾರ ಕೂಡ ನೀಡುತ್ತೇವೆ ಎಂದು ಹೇಳಿದರು.

ಚನ್ನಪಟ್ಟಣ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್ ಅವರು ಕಾಂಗ್ರೆಸ್ಸಿಗೆ ಸೇರಲು ಉತ್ಸುಕರಾಗಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಕಾಂಗ್ರೆಸ್ಸಿನ ಸಿದ್ಧಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಒಪ್ಪಿ ಬರುವ ಎಲ್ಲರಿಗೂ ಪಕ್ಷಕ್ಕೆ ಸ್ವಾಗತ ಎಂದರು.

ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದರಾದ ಈ.ತುಕಾರಾಂ ಅವರ ಪತ್ನಿ ಅವರಿಗೆ ಟಿಕೆಟ್ ನೀಡಲಾಗುವುದು. ಚನ್ನಪಟ್ಟಣದಲ್ಲಿ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎನ್ನುವ ಚರ್ಚೆ ಆಗಿದೆ. ಡಿ.ಕೆ.ಸುರೇಶ್ ಅವರೂ ಕೂಡ ಪ್ರಭಲ ಅಭ್ಯರ್ಥಿ ಆಗಿದ್ದಾರೆ. ಒಂದೆರಡು ದಿನಗಳಲ್ಲಿ ಚನ್ನಪಟ್ಟಣ ಮತ್ತು ಶಿಗ್ಗಾಂವ್ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಎನ್ನುವುದು ಸ್ಪಷ್ಟವಾಗಲಿದೆ ಎಂದರು.

Leave A Reply

Your email address will not be published.