C P Yogeshwar: ಫಲಿಸಿದ ಡಿಸಿಎಂ ತಂತ್ರಗಾರಿಕೆ; ಕಾಂಗ್ರೆಸ್‌ ಅಭ್ಯರ್ಥಿಯಾಗಿ ಯೋಗೇಶ್ವರ್‌ ಸ್ಪರ್ಧೆ?

C P Yogeshwar: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರನ್ನು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಗಿಳಿಸಲಾಗಿರುವ ಕುರಿತು ಖಚಿತ ಮಾಹಿತಿ ವರದಿಯಾಗಿದೆ. ಈ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ತಂತ್ರಗಾರಿಕೆ ಇಲ್ಲಿ ಫಲಿಸಿದೆ ಎನ್ನಲಾಗಿದೆ.

ಎಲ್ಲರಿಗೂ ತಿಳಿದಿರುವ ಹಾಗೆ ಹೈವೋಲ್ಟೇಜ್‌ ಕಣವಾಗಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧೆ ಮಾಡಲು ವಿರೋಧ ಮಾಡಿದ ಸಿಪಿ ಯೋಗೇಶ್ವರ್‌, ಬಿಜೆಪಿಯಿಂದ ಟಿಕೆಟ್‌ ನೀಡುವಂತೆ ಒತ್ತಡ ಹಾಕಿದ್ದರು. ಆದರೆ ಇದಕ್ಕೆ ಸ್ಪಂದನೆ ದೊರಕದ ಕಾರಣ ಇದೀಗ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್‌ ಇದೀಗ ಯೋಗೇಶ್ವರ್‌ ಅವರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಯೋಗೇಶ್ವರ್‌ ಅವರನ್ನು ಉಳಿಸಿಕೊಳ್ಳಲು ಬಿಜೆಪಿ ನಾಯಕರು ಕೊನೆಯ ಕ್ಷಣದವರೆಗೂ ಪ್ರಯತ್ನಪಟ್ಟಿದ್ದಾರೆ. ಆದರೆ ಇದು ವಿಫಲವಾಗಿದೆ. ಅಲ್ಲದೇ ನಿನ್ನೆ (ಮಂಗಳವಾರ) ತಡರಾತ್ರಿ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಕಾಂಗ್ರೆಸ್‌ ಸೇರ್ಪಡೆಗೆ ಮುಂದಾಗಿರುವ ಕುರಿತು ವರದಿಯಾಗಿದೆ.

ಈ ಮೂಲಕ ಯೋಗೇಶ್ವರ್‌ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧೆಗಿಳಿಯುವುದು ಖಚಿತ ಎನ್ನಲಾಗಿದೆ. ಆದರೆ ಈ ನಡುವೆ ಅವರು ಸಮಾಜವಾದಿ ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಮಾತು ಕೂಡಾ ಬಂದಿತ್ತು.

Leave A Reply

Your email address will not be published.