Ration Card Update: ಪಡಿತರ ಚೀಟಿದಾರರೇ ನ.30 ರೊಳಗೆ ಇ-ಕೆವೈಸಿ ಮಾಡಿಸದಿದ್ದರೆ ರೇಷನ್‌ ಸಿಗಲ್ಲ

Share the Article

Ration Card Update: ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದು, ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್‌ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಬೆರಳಚ್ಚು ನೀಡಿ ಇ-ಕೆವೈಸಿ ಕಾರ್ಯ ಮಾಡಿಸಬೇಕು.

ಅಂದ ಹಾಗೆ ಇದು ಉಚಿತ ಸೌಲಭ್ಯವಾಗಿದ್ದು, ಯಾವುದೇ ಹಣ ಪಾವತಿ ಮಾಡುವಂತಿಲ್ಲ. ಇ-ಕೆವೈಸಿ ಮಾಡದೇ ಇದ್ದರೆ ಫಲಾನುಭವಿಗಳಿಗೆ ಡಿಸೆಂಬರ್‌ ತಿಂಗಳಿನಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತ ಮಾಡಲು ಕ್ರಮ ವಹಿಸಲಾಗುವುದು.

ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಕೂಡಾ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಹೆಬ್ಬೆರಳು ನೀಡಿ ಮರು ನೋಂದಣಿ ಮಾಡಬೇಕು ಎಂದು ಬಳ್ಳಾರಿ ಜಿಲ್ಲೆಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನಾ ಅವರು ಹೇಳಿದ್ದಾರೆ.

Leave A Reply