Mangaluru: ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್‌ ವಾಹನ ಡಿಕ್ಕಿ-ಬಾಲಕಿ ಸಾವು

Mangalore: ಶಾಲಾ ಮಕ್ಕಳನ್ನು ಕೊಂಡೊಯ್ಯುವ ಆಟೋ ರಿಕ್ಷಾ ಮತ್ತು ಪಿಕಪ್‌ ವಾಹನ ನಡುವೆ ಅಪಘಾತ ಸಂಭವಿಸಿದ್ದು, 4 ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಸಾವಿಗೀಡಾಗಿರುವ ಘಟನೆಯೊಂದು ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ಇಂದು (ಅ.24) (ಗುರುವಾರ) ನಡೆದಿದೆ.

 

ಬಡಕಬೈಲು ನಿವಾಸಿ ಮುಹಮ್ಮದ್‌ ಬಿ ಮೋನು ಮತ್ತು ಮುನ್ಹೀಯಾ ದಂಪತಿ ಪುತ್ರಿ ಆಯಿಷಾ ವಹಿಬಾ (11) ಮೃತ ವಿದ್ಯಾರ್ಥಿನಿ.

ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ಆಟೋಗೆ ಕಲ್ಪಾದೆ ಬಳಿ ಬರುತ್ತಿದ್ದಂತೆ ಎದುರಿನಿಂದ ಅತಿ ವೇಗದಿಂದ ಬಂದ ಪಿಕಪ್‌ ವಾಹನವು ಡಿಕ್ಕಿ ಹೊಡೆದಿದೆ. ಪರಿಣಾಮ ರಿಕ್ಷಾ ಪಲ್ಟಿಯಾಗಿದ್ದು, ಆಯಿಷಾ ವಹಿಬಾ ಎಂಬ ವಿದ್ಯಾರ್ಥಿನಿ ಗಂಭೀರ ಗಾಯಗೊಂಡಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನದಲ್ಲಿ ದಾರಿ ಮಧ್ಯೆಯೇ ಮೃತ ಹೊಂದಿದ್ದಾಳೆ.

ಇತರ ಮೂವರು ವಿದ್ಯಾರ್ಥಿಗಳು ಕೂಡಾ ಅಲ್ಪಸ್ವಲ್ಪ ಗಾಯಗೊಂಡಿದ್ದು, ರಿಕ್ಷಾ ಚಾಲಕನಿಗೂ ಗಾಯವಾಗಿದೆ. ಗಾಯಾಳುಗಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Leave A Reply

Your email address will not be published.