Mangaluru: ವಿಧಾನಪರಿಷತ್‌ ಉಪ ಚುನಾವಣೆ; ಮತ ಎಣಿಕೆ ಕಾರ್ಯ ಪ್ರಾರಂಭ

Share the Article

Mangaluru: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್‌ ಉಪಚುನಾವಣೆಯ ಮತ ಎಣಿಕೆ ಇಂದು (ಅ.24) ಪ್ರಾರಂಭವಾಗಿದೆ. ಬೆಳಗ್ಗೆ 8 ಗಂಟೆಗೆ ಮಂಗಳೂರಿನ ಸಂತ ಅಲೋಷಿಯಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಪ್ರಾರಂಭಗೊಂಡಿದೆ.

ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಲಾಗುತ್ತದೆ. ನಂತರ ನಿಗದಿತ ಕೋಟವನ್ನು ಮೊದಲ ಪ್ರಾಶಸ್ತ್ಯದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆ ಮಾಡಿ, ಘೋಷನೆ ಮಾಡಲಾಗುವುದು.

ಕೇಂದ್ರ ಚುನಾವಣಾ ವೀಕ್ಷಕ ಪಂಕಜ್‌ ಕುಮಾರ್‌ ಪಾಂಡೆ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದಾರೆ.

Leave A Reply