Weather Forecast: ಕರ್ನಾಟಕದ ಹವಾಮಾನ ವರದಿ: ಇಂದು ಉತ್ತಮ ಮಳೆಯ ಮುನ್ಸೂಚನೆ
Weather Forecast: ಕಾಸರಗೋಡು(Kasargodu), ದಕ್ಷಿಣ ಕನ್ನಡ(Dakshina Kannada) ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಮಳೆಯ(Tunder and Rain) ಮುನ್ಸೂಚನೆ ಇದೆ. ಆದರೆ ಗಾಳಿಯ ಪಾತ್ರ ಮಹತ್ವದ್ದು. ಉಡುಪಿ(Udupi) ಮಧ್ಯಾಹ್ನ ನಂತರ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 25ರಂದು ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದ್ದು, 26ರಿಂದ ಮಳೆಯ ಸಾಧ್ಯತೆ ಕಾಣುತ್ತಿಲ್ಲ.
ಮಲೆನಾಡು : ಕೊಡಗು ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಮತ್ತು ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 25ರಂದು ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದ್ದು, 26ರಿಂದ ಮಳೆಯ ಸಾಧ್ಯತೆ ಕಾಣುತ್ತಿಲ್ಲ.
ಒಳನಾಡು : ಉತ್ತರ ಒಳನಾಡಿನ ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಒಕ್ಟೊಬರ್ 25ರಿಂದ ಮಳೆಯ ಸಾಧ್ಯತೆ ತೀರಾ ಕಡಿಮೆಯಾಗಲಿದೆ.
ಬಂಗಾಳಕೊಲ್ಲಿಯ ಡಾನಾ ಚಂಡಮಾರುತವು ಇಂದು ರಾತ್ರಿ ಒಡಿಸ್ಸಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿವೆ. ಅರಬ್ಬಿ ಸಮುದ್ರದ ತಿರುವಿಕೆಯ ಇನ್ನಷ್ಟು ಪಶ್ಚಿಮಕ್ಕೆ ಚಲಿಸುವ ಲಕ್ಷಣಗಳಿವೆ. ಈಗಿನಂತೆ ಚಂಡಮಾರುತದ ಪ್ರಭಾವದಿಂದ ಹಿಂಗಾರು ಅತಿ ದುರ್ಬಲಗೊಂಡಿದ್ದು, ಈಗಿನ ವಾತಾವರಣದ ಅಧಿಕ ತಾಪಮಾನದಿಂದ ಸ್ಥಳೀಯವಾಗಿ ಉಂಟಾಗುವ ಮೋಡಗಳಿಂದ ಒಕ್ಟೊಬರ್ 29ರಿಂದ ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಮತ್ತು 30ರಿಂದ ಒಳನಾಡಿನ ಅಲ್ಲಲ್ಲಿ ಸಾಮಾನ್ಯ ಮಳೆ ಆರಂಭವಾಗುವ ಲಕ್ಷಣಗಳಿವೆ.