Nikhil Kumarswamy : ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ – ನಿಖಿಲ್ ಹೊಂದಿರೋ ಆಸ್ತಿ ಎಷ್ಟು?

Share the Article

Nikhil Kumarswamy: ಚನ್ನಪಟ್ಟಣ ಉಪಚುನಾವಣೆಗೆ NDA ಮೈತ್ರಿ ಅಭ್ಯರ್ಥಿ ಯಾರಾಗುತ್ತಾರೆ ಎಂಬ ವಿಚಾರ ರಾಜ್ಯಾದ್ಯಂತ ಭಾರೀ ಕುತೂಹಲ ಮೂಡಿಸಿತ್ತು. ಆದರೀಗ ಈ ಕುತೂಹಲಕ್ಕೆ ತೆರೆ ಬಿದ್ದಿದ್ದು, ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ, ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯೋದು ಫಿಕ್ಸ್ ಆಗಿದೆ.

ಟಿಕೆಟ್ ಘೋಷಣೆ ಆದ ಬಳಿಕ ಚನ್ನಪಟ್ಟಣ ಉಪಚುನಾವಣೆಯ (Channapatna Bypoll) ‘ಮೈತ್ರಿ’ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಅವರು ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದು, ತಮ್ಮ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಒಟ್ಟು ಆಸ್ತಿ ಎಷ್ಟೆಂಬುದು ಬಹಿರಂಗಗೊಂಡಿದೆ. ಹಾಗಿದ್ರೆ ನಿಖಿಲ್ ಆಸ್ತಿ ಎಷ್ಟಿದೆ, ಅವರು ಓದಿದ್ದು ಏನು ಗೊತ್ತಾ?

ಬಿಬಿಎ ಪದವೀಧರನಾಗಿರುವ ನಿಖಿಲ್‌ ಬರೋಬ್ಬರಿ 113 ಕೋಟಿ ಆಸ್ತಿ ಒಡೆಯ. ಒಟ್ಟು 78.15 ಕೋಟಿ ಮೌಲ್ಯದ ಚರಾಸ್ತಿ, 29.34ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಪತ್ನಿ ರೇವತಿ ನಿಖಿಲ್ ಹೆಸರಲ್ಲಿ 5.49ಕೋಟಿ ಮೌಲ್ಯದ ಚರಾಸ್ತಿ, 43 ಲಕ್ಷ ಮೌಲ್ಯದ ಸ್ಥಿರಾಸ್ತಿ ಇದೆ. ಮಗ ಆವ್ಯಾನ್ ದೇವ್ ಹೆಸರಲ್ಲಿ 11 ಲಕ್ಷ ಹಣ ಇದೆ.

ಅಲ್ಲದೆ ನಿಖಿಲ್ ಕುಮಾರಸ್ವಾಮಿ ಹೆಸರಲ್ಲಿ 1.488 ಕೆಜಿ ಚಿನ್ನ, 16 ಕೆಜಿ ಬೆಳ್ಳಿ ಹಾಗೂ ರೇವತಿ ಹೆಸರಲ್ಲಿ 1.411 ಕೆಜಿ ಚಿನ್ನ, 33.05 ಕೆಜಿ ಬೆಳ್ಳಿ, 13 ಕ್ಯಾರೆಟ್ ಡೈಮಂಡ್ ಇದೆ. 1 ಇನ್ನೋವಾ ಐ ಕ್ರಾಸ್, 1 ರೇಂಜ್ ರೋವರ್ ಹಾಗೂ ಎರಡು ಕ್ಯಾರಾವ್ಯಾನ್, 1 ಇನ್ನೋವಾ ಕ್ರಿಸ್ಟ ಕಾರು ಇದೆ. ಒಟ್ಟಿನಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಒಟ್ಟು 113 ಕೋಟಿ ಆಸ್ತಿ ಒಡೆಯರಾಗಿದ್ದಾರೆ.

Leave A Reply

Your email address will not be published.