Alcohol: ಎಣ್ಣೆಪ್ರಿಯರಿಗೆ ಬಿಗ್ ಶಾಕ್! ನವೆಂಬರ್‌ 20ರಿಂದ ರಾಜ್ಯಾದ್ಯಂತ ಮದ್ಯದಂಗಡಿ ಬಂದ್‌?

Share the Article

Alcohol : ರಾಜ್ಯದಲ್ಲಿ ವಿವಿಧ ಇಲಾಖೆಗಳ ಬಗ್ಗೆ ಭ್ರಷ್ಟಾಚಾರದ ಆರೋಪ ಕೇಳಿಬರುತ್ತಿರುವುದು ನಮಗೆಲ್ಲರಿಗೂ ತಿಳಿದಿರುವ ವಿಚಾರ. ಅಂತೆಯೇ ಇದೀಗ ಅಬಕಾರಿ ಇಲಾಖೆಯಲ್ಲೂ ಭಾರಿ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ.

ರಾಜ್ಯದಲ್ಲಿರೋ ಅಬಕಾರಿ ಇಲಾಖೆಯ ಭ್ರಷ್ಟಚಾರ ಬಗ್ಗೆ ಮದ್ಯದಂಗಡಿ (Alchohal) ಮಾಲೀಕರೇ ಬೃಹತ್‌ ಪ್ರತಿಭಟನೆ ನಡೆಸುವ ಮೂಲಕ ಅಬಕಾರಿ ಇಲಾಖೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಇದಕ್ಕೆ ಕಾರಣವಾಗಿರುವ ಅಬಕಾರಿ ಸಚಿವರನ್ನೇ ಮೊದಲು ಬದಲಾಯಿಸಿ ಎಂದು ಸರ್ಕಾರಕ್ಕೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕದಿದ್ದರೆ ನವೆಂಬರ್‌ 20ರಿಂದ ಎಲ್ಲ ಮದ್ಯದಂಗಡಿಗಳನ್ನು ಬಂದ್‌ ಮಾಡುವುದಾಗಿ ಮಾಲೀಕರು ಸರ್ಕಾರಕ್ಕೆ ವಾರ್ನಿಂಗ್‌ ಕೊಟ್ಟಿದ್ದಾರೆ.

ಫೆಡರೇಷನ್‌ ಆಫ್‌ ವೈನ್‌ ಮರ್ಚೆಂಟ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ಎಸ್‌.ಗುರುಸ್ವಾಮಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಅಬಕಾರಿ ಇಲಾಖೆಯಲ್ಲಿ ಲಂಚಕೋರತನ ಮಿತಿಮೀರುತ್ತಿದೆ ಎಂದು ಆರೋಪಿಸಿದ್ದಾರೆ. ಅಧಿಕಾರಿಗಳು ಭಾರಿ ಕಿರುಕುಳ ನೀಡುತ್ತಿದ್ದು, ಅಧಿಕಾರಿಗಳ ವರ್ಗಾವಣೆಗೆ ಕೋಟ್ಯಂತರ ಹಣ ವಸೂಲಿ ನಡೆಯುತ್ತಿದೆ ಎಂದು ಸಚಿವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.
ಈಗಾಗಲೇ ಅಮಾನತುಗೊಂಡಿರುವ ಅಧಿಕಾರಿಗಳಿಗೆ ಯಾವುದೇ ಲಾಭದಾಯಕ ಹುದ್ದೆಗಳನ್ನು ನೀಡಬಾರದು. ಮೂರು ವರ್ಷ ಒಂದೇ ಜಿಲ್ಲೆಯಲ್ಲಿ ಕರ್ತವ್ಯ ಸಲ್ಲಿಸಿದ ಅಧಿಕಾರಿಗಳನ್ನು ತಕ್ಷಣವೇ ಬೇರೆ ಜಿಲ್ಲೆಗಳಿಗೆ ಟ್ರಾನ್ಸ್‌ಫರ್‌ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಇನ್ನು ಮದ್ಯದಂಗಡಿ ಮಾಲೀಕರ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವುದರಿಂದ ಕೂಡಲೇ ಭ್ರಷ್ಟಾಚಾರಕ್ಕೆ ಬ್ರೇಕ್‌ ಹಾಕಬೇಕು ಎಂದು ಗಡುವು ನೀಡಿದ್ದಾರೆ. ಮುಂದಿನ ತಿಂಗಳೊಳಗೆ ಸರ್ಕಾರ ಈ ಬೇಡಿಕೆಗಳನ್ನು ಈಡೇರಿಸದಿದ್ದರೆ, ಎಲ್ಲ ಮದ್ಯದಂಗಡಿಗಳನ್ನು ಬಂದ್‌ ಮಾಡುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

Leave A Reply