HSRP number plate: ವಾಹನ ಸವಾರರೇ `HSRP’ ನಂಬರ್ ಪ್ಲೇಟ್ ಬಿಗ್ ಅಪ್ಡೇಟ್ ಇಲ್ಲಿದೆ!
HSRP number plate: ಈಗಾಗಲೇ ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮುನ್ನ ನೋಂದಣಿಯಾದ ಎಲ್ಲ ಮಾದರಿಯ ವಾಹನಗಳಿಗೆ ಮೂಲ ಉಪಕರಣ ತಯಾರಕ (ಓಇಎಂ) ಅಧಿಕೃತ ಡೀಲರ್ಗಳ ಮೂಲಕ ಎಚ್ಎಸ್ಆರ್ಪಿ ಅಳವಡಿಸಿಕೊಳ್ಳಲು ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿತ್ತು. ಸದ್ಯ ಈಗ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ ನವೆಂಬರ್.20ರವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ (HSRP number plate) ಅಳವಡಿಕೆಗೆ ಹೈಕೋರ್ಟ್ ಗಡುವು ವಿಸ್ತರಿಸಿದೆ.
ಹೌದು, ಅತಿ ಸುರಕ್ಷಿತ ನೋಂದಣಿ ಫಲಕ (High Security Registration Plates- HSRP) ಅಳವಡಿಕೆಗೆ ಕಾಲಾವಕಾಶ ನೀಡುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಗಿದ್ದು, ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್ ನ್ಯಾಯಪೀಠವನ್ನು ಮತ್ತಷ್ಟು ಕಾಲಾವಕಾಶ ನೀಡುವಂತೆ ಕೋರಿದ್ದರು. ಮನವಿ ಪರಿಗಣಿಸಿದಂತ ನ್ಯಾಯಾಲಯವು ವಿಚಾರಣೆ ಮುಂದೂಡಿಕೆ ಮಾಡಿದೆ.
ಈ ಹಿನ್ನಲೆಯಲ್ಲಿ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್.20, 2024ರವರೆಗೆ ಅವಧಿ ವಿಸ್ತರಿಸಿದೆ. ಈ ಮೂಲಕ ವಾಹನ ಸವಾರರಿಗೆ ಸದ್ಯಕ್ಕೆ ದಂಡದ ಟೆನ್ಷನ್ ನಿಂದ ಮುಕ್ತಿ ಸಿಕ್ಕಂತೆ ಆಗಿದೆ.