CM Siddaramaiah : ವಿಜಯಪುರ ವಕ್ಪ್ ಆಸ್ತಿ ವಿವಾದ- ರೈತರಿಗೆ ಕೊಟ್ಟ ನೋಟೀಸ್ ವಾಪಸ್ ಪಡೆಯುತ್ತೇವೆ, ಸಿಎಂ ಸಿದ್ದರಾಮಯ್ಯ ಘೋಷಣೆ!

CM Siddaramiah: ವಿಜಯಪುರ(Vijayapura) ವಕ್ಫ್ ಆಸ್ತಿ ನೋಂದಣಿ ವಿವಾದ ರಾಜ್ಯಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ರೈತರು ಸರ್ಕಾರದ ವಿರುದ್ಧ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಇದನ್ನು ಬಿಜೆಪಿ ಕೂಡ ಸರ್ಕಾರದ ವಿರುದ್ಧ ಅಸ್ತ್ರವಾಗಿ ಬಳಸುತ್ತಿದೆ. ಈ ಬೆನ್ನಲ್ಲೇ ಮುಖ್ಯಮತ್ರಿ ಸಿದ್ದರಾಮಯ್ಯ ಅವರು ರೈತರಿಗೆ ಮತ್ತು ಮಠ, ಮಂದಿರಗಳಿಗೆ ವಕ್ಫ್ ಆಸ್ತಿಯೆಂದು ನೋಟೀಸ್ ನೀಡಲಾಗಿದ್ದರೆ, ಎಲ್ಲ ನೊಟೀಸ್‌ಗಳನ್ನು ವಾಪಸ್ ಪಡೆದುಕೊಳ್ಳುತ್ತೇವೆ ಎಂದು ಘೋಶಿಸಿದ್ದಾರೆ.

 

ಹೌದು, ಬೆಂಗಳೂರಿನಲ್ಲಿ ಮಂಗಳವಾರ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ(CM Siddaramiah ) ಅವರು ರಾಜ್ಯದಲ್ಲಿ ತೀವ್ರ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿರುವ ವಿಜಯಪುರ ಸೇರಿದಂತೆ ರಾಜ್ಯದ ವಿವಿಧೆಡೆ ರೈತರಿಗೆ ಮತ್ತು ಮಠ, ಮಂದಿರಗಳಿಗೆ ವಕ್ಫ್ ಆಸ್ತಿಯೆಂದು ನೋಟೀಸ್ ನೀಡಲಾಗಿದ್ದರೆ, ಎಲ್ಲ ನೊಟೀಸ್‌ಗಳನ್ನು ವಾಪಸ್ ಪಡೆದುಕೊಳ್ಳುತ್ತೇವೆ ಎಂದು ಮುಖ್ಯಮತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅಲ್ಲದೆ ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ರೈತರಿಗೆ ನೊಟೀಸ್ ನೀಡುವ ಮೂಲಕ ಯಾವುದೇ ರೈತರನ್ನು ಒಕ್ಕಲೆಬ್ಬಿಸಲ್ಲ. ನಿನ್ನೆ ಈ ಬಗ್ಗೆ ಕಂದಾಯ ಸಚಿವರು ಸ್ಪಷ್ಟಪಡಿಸಿದ್ದಾರೆ. ವಿಜಯಪುರದಲ್ಲಿ ಯಾವುದೇ ರೈತರನ್ನು ಒಕ್ಕಲೆಬ್ಬಿಸಲ್ಲ. ಒಂದೊಮ್ಮೆ ನೊಟೀಸ್ ಕೊಟ್ಟಿದ್ದರೆ ನೊಟೀಸ್ ವಾಪಸ್ ಪಡೆಯುತ್ತೇವೆ. ಧಾರವಾಡದಲ್ಲೂ ರೈತರಿಗೆ ನೊಟೀಸ್ ಕೊಟ್ಟಿದ್ದರೆ ನಾವು ಅದನ್ನು ಪರಿಶೀಲನೆ ಮಾಡಲಾಗುವುದು ಎಂದು ಸ್ಪಷ್ಟನೆಯನ್ನು ನೀಡಿದರು.

Leave A Reply

Your email address will not be published.