Yogi Adityanath: ಯುಪಿ ಸಿಎಂ ಯೋಗಿಗೆ ಕೊಲೆ ಬೆದರಿಕೆ ಹಾಕಿದ ಯುವತಿಯ ಅರೆಸ್ಟ್? ಅಷ್ಟಕ್ಕೂ ಆಕೆ ಹಿನ್ನಲೆ ಏನು?

Share the Article

Yogi adithyanath: ಯೋಗಿ ಅವರು 10 ದಿನಗಳೊಳಗೆ ಸಿಎಂ ಸ್ಥಾನದಿಂದ ಕೆಳಗಿಳಿಯದಿದ್ದರೆ ಮುಂಬೈನಲ್ಲಿ ಗುಂಡೇಟಿಗೆ ಬಲಿಯಾದ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್‌ಗೆ ಅದೇ ಗತಿ ಬರಲಿದೆ ಎಂದು ಮುಂಬೈ ಸಂಚಾರ ಪೊಲೀಸರ ವಾಟ್ಸಾಪ್ ಸಂಖ್ಯೆಗೆ ಶನಿವಾರ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಿತ್ತು. ಪೊಲೀಸರು ವರ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಇದೀಗ ಮುಂಬೈ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬೆದರಿಕೆ ಹಾಕಿದ ಮಹಿಳೆಯನ್ನು ಪತ್ತೆಹಚ್ಚಿದೆ.

ಹೌದು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ (Yogi adithyanat) ಜೀವ ಬೆದರಿಕೆ ಹಾಕಿದ್ದ ಆರೋಪದ ಮೇಲೆ 24 ವರ್ಷದ ಮಾನಸಿಕ ಅಸ್ಥಿರ ಮಹಿಳೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಮಹಿಳೆಯನ್ನು ಫಾತಿಮಾ ಖಾನ್ ಎಂದು ಗುರುತಿಸಲಾಗಿದೆ.

ಫಾತಿಮಾ ಖಾನ್ ಎಂಬಾಕೆ ತನ್ನ ಕುಟುಂಬ ಸದಸ್ಯರೊಂದಿಗೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸ್‌ನಗರ ಪ್ರದೇಶದಲ್ಲಿ ನೆಲೆಸಿದ್ದಳು. ಆಕೆ ಈ ಹಿಂದೆ ಮಾಹಿತಿ ತಂತ್ರಜ್ಞಾನದಲ್ಲಿ ಬಿಎಸ್ಸಿ ವ್ಯಾಸಂಗ ಮಾಡಿದ್ದಾಳೆ, ಆದರೆ ಮಾನಸಿಕವಾಗಿ ಅಸ್ಥಿರಳಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ತನಿಖೆಯಲ್ಲಿ ಫಾತಿಮಾ ಖಾನ್ ವಾಟ್ಸಾಪ್ ನಂಬರ್‌ಗೆ ಬೆದರಿಕೆ ಸಂದೇಶ ಕಳುಹಿಸಿರುವುದು ಮುಂಬೈ ಭಯೋತ್ಪಾದನಾ ನಿಗ್ರಹ ದಳ ಮೂಲಕ (ಎಟಿಎಸ್) ತಿಳಿದು ಬಂದಿದೆ. ಇದೀಗ ಉಲ್ಲಾಸನಗರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಆಕೆಯನ್ನು ಬಂಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

Leave A Reply