MUDA Scam: ಮೂಡಾ ಹಗರಣ: ಎ1 ಸಿಎಂ ಸಿದ್ದರಾಮಯ್ಯಗೆ ನೋಟಿಸ್‌ ಜಾರಿ

Share the Article

MUDA Scam: ಮೂಡಾ ಹಗರಣದ ತನಿಖೆ ಚುರುಕುಗೊಂಡಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗಲು ಎ1 ಅರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೋಟಿಸ್‌ ಜಾರಿ ಮಾಡಿದೆ.

ನವೆಂಬರ್‌ 6 ರಂದು ವಿಚಾರಣೆಗೆ ಹಾಜರಾಗಲು ಸಿದ್ದರಾಮಯ್ಯಗೆ ಸೂಚನೆ ನೀಡಲಾಗಿದೆ.

ಎಲ್ಲಾ ಆರೋಪಿಗಳ ವಿಚಾರಣೆಯನ್ನು ಲೋಕಾಯುಕ್ತ ವಿಚಾರಣೆ ಮುಗಿಸಿದ್ದು, ಕೇವಲ ಸಿದ್ದರಾಮಯ್ಯನವರ ವಿಚಾರಣೆ ಮಾತ್ರ ಬಾಕಿ ಇತ್ತು. ಇದೀಗ ಎ1 ಆರೋಪಿಗೆ ಕೂಡಾ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲು ನೋಟಿಸ್‌ ಜಾರಿ ಮಾಡಿದೆ.

ಎ2 ಪಾರ್ವತಿ ಸಿದ್ದರಾಮಯ್ಯ, ಎ3 ಮಲ್ಲಿಕಾರ್ಜುನ, ಎ4 ದೇವರಾಜು ಸೇರಿ ಹಲವರ ವಿಚಾರಣೆಯನ್ನು ಲೋಕಾಯುಕ್ತ ವಿಚಾರಣೆ ಮಾಡಿದೆ. ಲೋಕಾಯುಕ್ತ ಮಹತ್ವದ ದಾಖಲೆಯನ್ನು ಕಲೆಹಾಕಿದೆ.

Leave A Reply