Kambala: ಕಂಬಳ ವಿಚಾರಣೆ; ಪೆಟಾ ಪಿಐಎಲ್‌, ವಿಚಾರಣೆ ನ.12ಕ್ಕೆ -ಹೈಕೋರ್ಟ್‌

Kambala: ಬೆಂಗಳೂರಿನಲ್ಲಿ ಕಂಬಳ ಆಯೋಜನೆಗೆ ಇಲ್ಲಿಯವರೆಗೆ ದಿನಾಂಕ ನಿಗದಿ ಪಡಿಸಿಲ್ಲ. ಆದರೆ ನವೆಂಬರ್‌ 17 ಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ಕಂಬಳ ನಡೆಯಲಿದೆ ಎಂದು ಹೈಕೋರ್ಟ್‌ ಮಾಹಿತಿ ನೀಡಿದೆ.

ಬೆಂಗಳೂರು ಕಂಬಳ ಸಮಿತಿಗೆ ಕಂಬಳ ಆಯೋಜಿಸಲು ಅನುಮತಿ ನೀಡದಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಪೀಪಲ್‌ ಫಾರ್‌ ದಿ ಎಥಿಕಲ್‌ ಟ್ರೀಟ್‌ಮೆಂಟ್‌ ಆಫ್‌ ಅನಿಮಲ್‌ (PETA) ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಹಾಗೂ ಕೆ.ವಿ.ಅರವಿಂದ ವಿಭಾಗೀಯದಲ್ಲಿ ಪೀಠದಲ್ಲಿ ವಿಚಾರಣೆ ನಡೆದಿದೆ.

ಬೆಂಗಳೂರಿನಲ್ಲಿ ಕಂಬಳ ಆಯೋಜನೆಗೆ ದಿನಾಂಕ ನಿಗದಿಯಾಗಿಲ್ಲ. ಆದರೆ ಪಿಲಿಕುಳದಲ್ಲಿ ನ.17 ರಂದು ಕಂಬಳ ನಡೆಯಲಿದೆ ಎಂದು ಅಡ್ವೋಕೇಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ ವಾದ ಮಂಡಿಸಿದ್ದು, ಇದಕ್ಕೆ ಅರ್ಜಿದಾರರ ಪರ ವಕೀಲ ಧ್ಯಾನ್‌ ಚಿನ್ನಪ್ಪ ಅವರು ನಮಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಥವಾ ಪಿಲಿಕುಳದಲ್ಲಿ ಕಂಬಳ ಆಯೋಜನೆಗೆ ಆಕ್ಷೇಪವಿಲ್ಲ. ಆದರೆ ಪಿಲಿಕುಳದಲ್ಲಿ ಮೃಗಾಲಯದ ಪಕ್ಕದಲ್ಲಿ ಕಂಬಳ ಸ್ಪರ್ಧೆ ಆಯೋಜನೆ ಮಾಡಲಾಗುತ್ತಿದೆ. ಇದಕ್ಕೆ ನಮ್ಮ ಆಕ್ಷೇಪವಿದೆ. ಈ ಕುರಿತು ಮೃಗಾಲಯದ ನಿರ್ದೇಶಕರೇ ಜಿಲ್ಲಾಧಿಕಾರಿಗೆ ಪತ್ರವನ್ನು ಬರೆದಿದ್ದಾರೆ, ಕಂಬಳದ ಸಂದರ್ಭದಲ್ಲಿ ಉಂಟಾಗುವ ಕೂಗಾಟದಿಂದ ಬೇರೆ ಪ್ರಾಣಿಗಳಿಗೆ ಸಮಸ್ಯೆಯಾಗುತ್ತದೆ ಎಂದು ಹೇಳಿದ್ದಾರೆ. ಇದು ನಮ್ಮ ವಾದವಾಗಿದೆ ಎಂದು ಹೇಳಿದ್ದಾರೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ನವೆಂಬರ್‌ 12 ಕ್ಕೆ ಮುಂದೂಡಿದೆ.

Leave A Reply

Your email address will not be published.