Siddaramaiah: ಇಂದು ಮೈಸೂರು ‘ಲೋಕಾ’ ಕಚೇರಿಯಲ್ಲಿ ಎ.1 ಆರೋಪಿಯಾಗಿರುವ ಸಿಎಂ ವಿಚಾರಣೆ!
Siddaramaiah: ಇಂದು
ಮೈಸೂರು ‘ಲೋಕಾ’ ಕಚೇರಿಯಲ್ಲಿ ಎ.1 ಆರೋಪಿಯಾಗಿರುವ ಸಿಎಂ ವಿಚಾರಣೆ ನಡೆಯಲಿದೆ. ಹೌದು, ಮುಡಾ ನಿವೇಶವನ್ನು ಅಕ್ರಮವಾಗಿ ಪಡೆದ ಪ್ರಕರಣದಲ್ಲಿ ಎ.1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬುಧವಾರ ಲೋಕಾಯುಕ್ತ ಪೊಲೀಸರು ವಿಚಾರಣೆ ಮಾಡಲಿದ್ದಾರೆ.
ಸದ್ಯ ಮುಖ್ಯಮಂತ್ರಿಗಳು ಈ ವಿಚಾರಣೆ ಹಿನ್ನಲೆ ಬೆಂಗಳೂರಿನ ಕಾವೇರಿ ನಿವಾಸದಿಂದ ಬೆಳಗ್ಗೆ ಮೈಸೂರಿನ ಲೋಕಾಯುಕ್ತ ಕಚೇರಿಗೆ ಪ್ರಯಾಣ ಬೆಳಸಿದ್ದಾರೆ. ಸುಮಾರು 10 ಗಂಟೆ ಬಳಿಕ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ವಿಚಾರಣೆಗೆ ಹಾಜರಾಗಲಿದ್ದಾರೆ .