Puttur: ಪುತ್ತೂರು: ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತ್ಯು!

Share the Article

Puttur: ಪುತ್ತೂರು (Puttur) ಅರಿಯಡ್ಕ ಗ್ರಾಮದ ಜಾರತ್ತಾರು ನಿವಾಸಿ ದಿನೇಶ್ ರೈ (42) ಎಂಬವರು ಮೃತ ಪಟ್ಟಿದ್ದಾರೆ. ದಿನೇಶ್ ರವರು ತನ್ನ ಮನೆಯಿಂದ ಸ್ವಲ್ಪ ದೂರದಲ್ಲೇ ಇರುವ ಟರ್ಪಾಲು ಹಾಸಿದ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇದೀಗ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಸಾರ್ವಜನಿಕರು ಕೂಡಿದ್ದು, ಜೊತೆಗೆ ಬಿಜೆಪಿ ಮುಖಂಡ ಅರುಣ್‌ ಕುಮಾರ್ ಪುತ್ತಿಲ ಕೂಡ ಬೇಟಿ ನೀಡಿದ್ದಾರೆ.
ಈ ಬಗ್ಗೆ ಹೆಚ್ಚಿನ ವಿಚಾರ ಇನ್ನಷ್ಟೇ ತಿಳಿದು ಬರಬೇಕಿದೆ.

Leave A Reply