D K Shivkumar : ನಾನೇ ಪೂರ್ಣಾವಧಿ ಸಿಎಂ ಎಂದ ಸಿದ್ದರಾಮಯ್ಯ – ಡಿಕೆಶಿಯಿಂದ ಶಾಕಿಂಗ್ ಸ್ಟೇಟ್ಮೆಂಟ್!!

D K Shivkumar : ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramiah )ಸಂಡೂರು ಉಪಚುನಾವಣಾ ಪ್ರಚಾರದ ವೇಳೆ ಮುಂದಿನ ಮೂರುವರೆ ವರ್ಷಗಳ ಕಾಲ ತಾವೇ ಮುಖ್ಯಮಂತ್ರಿಯಾಗಿ ಮುಂದುವರಿಯುವೆ ಎಂಬರ್ಥದ ಹೇಳಿಕೆ ನೀಡಿದ್ದಾರೆ. ಇದೀಗ ಈ ಕುರಿತು ಡಿಕೆ ಶಿವಕುಮಾರ್(DK Shivkumar )ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಹೌದು, ಸಂಡೂರಿನಲ್ಲಿ(Sandur) ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮುಂದಿನ ಮೂರುವರೆ ವರ್ಷ ಯಾರು ಅಧಿಕಾರದಲ್ಲಿರುವವರು ಎಂದು ಪ್ರಶ್ನಿಸುತ್ತಾರೆ. ಆಗ ಸಮಾವೇಶದಲ್ಲಿ ನೆರೆದಿದ್ದ ಜನರು, ‘ಕಾಂಗ್ರೆಸ್’ ಎಂದು ಘೋಷಣೆ ಕೂಗಿದ್ದಾರೆ. ಜನರ ಮಾತಿಗೆ ದನಿಗೂಡಿಸಿ ಮಾತನಾಡಿದ ಸಿಎಂ, ‘ಸಿದ್ದರಾಮಯ್ಯ, ಕಾಂಗ್ರೆಸ್’ ಎಂದು ಒತ್ತುಕೊಟ್ಟು ಹೇಳಿದ್ದಾರೆ. ಆ ಮೂಲಕ ಮೂರುವರೆ ವರ್ಷ ನಾನೇ ಸಿಎಂ ಎಂಬ ಸಂದೇಶ ಸಾರಿದ್ದಾರೆ. ಈ ಬೆನ್ನಲ್ಲೇ ನಾನೇ ಪೂರ್ಣಾವಧಿ ಸಿಎಂ ಎಂದು ಹೇಳಿದ ಸಿಎಂ ಸಿದ್ದರಾಮಯ್ಯ ಮಾತಿಗೆ ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಮಾತಾಡಿದ ಡಿಕೆಶಿ, ಸಿಎಂ ಸಿದ್ದರಾಮಯ್ಯ ಮಾಸ್ ಲೀಡರ್, ಅವರನ್ನ ರಾಜಕೀಯವಾಗಿ ಮುಗಿಸಲು ಬಿಜೆಪಿ-ಜೆಡಿಎಸ್ ಹುನ್ನಾರ ನಡೆಸಿವೆ. ದೇಶದ ಎಲ್ಲಾ ವಿಪಕ್ಷಗಳನ್ನ ಮುಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಹೀಗಾಗಿಯೇ ಸಿಎಂ ಆ ರೀತಿಯ ಹೇಳಿಕೆ ನೀಡಿದ್ದಾರೆ. ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ವಿಪಕ್ಷಗಳು ಅನಗತ್ಯ ಗೊಂದಲ ಸೃಷ್ಟಿ ಮಾಡುತ್ತಿವೆ. ಸರ್ಕಾರ ಸುಭದ್ರವಾಗಿದ್ದು, ಸಿಎಂ ಕುರ್ಚಿ ವಿಚಾರದಲ್ಲಿ ಹೈ ಕಮಾಂಡ್ ತೀರ್ಮಾನವೇ ಅಂತಿಮ ಎಂದು ಡಿಸಿಎಂ ಡಿಕೆಶಿ ಸ್ಪಷ್ಟನೆ ಕೊಟ್ಟಿದ್ದಾರೆ.

Leave A Reply

Your email address will not be published.