Mangaluru: ಪತ್ನಿ, ಮಗುನ ಕೊಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ ಪತಿ

Share the Article

Mulky: ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಎಂಬಲ್ಲಿ ಜಲಜಾಕ್ಷಿ ರೆಸಿಡೆನ್ಸಿ ಬಹುಮಹಡಿ ಕಟ್ಟಡದಲ್ಲಿ ವಾಸವಿದ್ದ ವ್ಯಕ್ತಿಯೊಬ್ಬ ಪತ್ನಿ ಮಗುವನ್ನು ಕೊಂದು ತಾನೂ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರುವ ದಾರುಣ ಘಟನೆಯೊಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕಾರ್ತಿಕ್‌ ಭಟ್‌ (32) ಎಂದು ಗುರುತಿಸಲಾಗಿದೆ.

ಪತ್ನಿ ಪ್ರಿಯಾಂಕ (28), ಮಗು ಹೃದಯ್‌ (4) ಹತ್ಯೆಗೀಡಾದ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಈ ಘಟನೆ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ.

ಆರೋಪಿ ಕಾರ್ತಿಕ್‌ ಪಕ್ಷಿಕೆರೆಯಲ್ಲಿರುವ ತನ್ನ ಮನೆಯಲ್ಲಿ ಪತ್ನಿ ಮತ್ತು ಮಗುವನ್ನು ಹತ್ಯೆ ಮಾಡಿ, ಮುಲ್ಕಿಯ ಬೆಳಾಯರುನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹ್ಯೆ ಮಾಡಿದ್ದಾನೆ. ಶುಕ್ರವಾರ ಮಧ್ಯಾಹ್ನ ವ್ಯಕ್ತಿಯೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ತನಿಖೆ ನಡೆಸಿದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡವರು ಕಾರ್ತಿಕ್‌ ಭಟ್‌ ಎಂದು ತಿಳಿದಿದ್ದು, ಮನೆಗೆ ಬಂದಾಗ ಪತ್ನಿ ಮತ್ತು ಮಗು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಮುಲ್ಕಿ ಪೊಲೀಸ್‌ ಇನ್ಸ್‌ಪೆಕ್ಟರ್‌ ವಿದ್ಯಾಧರ, ಮಂಗಳೂರು ಎಸಿಪಿ ಶ್ರೀಕಾಂತ್‌ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಸಹಕಾರಿ ಬ್ಯಾಂಕ್‌ನಲ್ಲಿ ಉದ್ಯೋಗ ಮಾಡಿಕೊಂಡಿದ್ದ ಕಾರ್ತಿಕ್‌ ಅವರು ಕೌಟುಂಬಿಕ ಸಮಸ್ಯೆಯಿಂದ ಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸೊಸೆ ಮತ್ತು ಮೊಮ್ಮಗನ ಮೃತದೇಹ ಮನೆಯಲ್ಲಿದ್ದರೂ ವೃದ್ಧ ಅತ್ತೆ ಮಾವನಿಗೆ ತಿಳಿದೇ ಇರಲಿಲ್ಲ. ಕಾರ್ತಿಕ್‌ ಪತ್ನಿಗೆ ಮಾವ, ಅತ್ತೆಯೊದಿಗೆ ಮನಸ್ತಾಪವಿದ್ದ ಕುರಿತು ಮಾಹಿತಿ ವರದಿಯಾಗಿದೆ ಮನೆಯ ಕೋಣೆಯಲ್ಲಿ ಮೃತ ಕಾರ್ತಿಕ್‌ ಕುಟುಂಬ ಪ್ರತ್ಯೇಕವಾಗಿದ್ದು, ಇಡೀ ದಿನ ಮನೆಯ ಕೋಣೆಯಲ್ಲೇ ಇರುತ್ತಿದ್ದರು ಎನ್ನಲಾಗಿದೆ.

ಮೃತ ಕಾರ್ತಿಕ್‌ ತಂದೆ ಜನಾರ್ಧನ ಭಟ್‌ ಪಕ್ಷಿಕೆರೆ ಜಂಕ್ಷನ್‌ನಲ್ಲಿ ಹೋಟೆಲ್‌ ನಡೆಸುತ್ತಿದ್ದು, ನಿನ್ನೆ ಬೆಳಗ್ಗೆ ಕೂಡಾ ಮನೆಯಿಂದ ಹೋಟೆಲ್‌ಗೆ ಹೋಗಿದ್ದರು. ಈ ವೇಳೆ ಹೆಂಡತಿ ಮತ್ತು ಮಗುವನ್ನು ಕಾರ್ತಿಕ್‌ ಹತ್ಯೆ ಮಾಡಿದ್ದಾರೆ.

ಮಧ್ಯಾಹ್ನ ಕಾರ್ತಿಕ್‌ ವಿಳಾಸ ಹುಡುಕಿ ಪಕ್ಷಿಕೆರೆಯ ಮನೆಗೆ ಪೊಲೀಸರು ಬಂದಾಗ, ಮನೆಯ ಕೋಣೆಯ ಬಾಗಿಲು ತೆರೆದಾಗ ಮೃತದೇಹ ಪತ್ತೆ ಆಗಿದೆ.

Leave A Reply

Your email address will not be published.