Temple: ಬಿಜೆಪಿ ಅಧಿಕಾರಕ್ಕೆ ಬಂದರೆ ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ತೆಗೆದುಹಾಕಲಾಗುತ್ತೆ: ಅಣ್ಣಾಮಲೈ ಘೋಷಣೆ

Temple: ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಆಕ್ಸರ್ಡ್ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರೊಂದಿಗೆ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುವ ವೇಳೆ, ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ರಾಜ್ಯದ ದೇವಾಲಯಗಳನ್ನು (Temple) ಸರ್ಕಾರದ ನಿಯಂತ್ರಣಕ್ಕೆ ಬ್ರೇಕ್ ಹಾಕುವುದಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಘೋಷಣೆ ಮಾಡಿದ್ದಾರೆ.
ಮುಖ್ಯವಾಗಿ ಭಾರತದಲ್ಲಿ ಮಾತ್ರ ಎಲ್ಲ ಮತ ಪಂಥದವರನ್ನು ಸಮಾನವಾಗಿ ನೋಡಲಾಗುತ್ತದೆ ಎಂದು ಅಣ್ಣಾಮಲೈ ಹೇಳಿದ್ದು, ಆದರೆ ಭಾರತದ ಮುಕ್ಕಾಲು ಭಾಗ ಜನರು ಪಾಲಿಸುತ್ತಿರುವ ದೇವಾಲಯಗಳು ಸಮಾನ ಗೌರವಕ್ಕೆ ಪಾತ್ರವಾಗಿಲ್ಲ. ಇದಕ್ಕೆ ಉದಾಹರಣೆ ಎಂಬಂತೆ ಚರ್ಚ್ ಮತ್ತು ಮಸೀದಿಗಳ ಮೇಲೆ ಸರ್ಕಾರದ ನಿಯಂತ್ರಣ ಇಲ್ಲದಿರುವಾಗ, ದೇವಾಲಯಗಳೂ ಕೂಡ ಸರ್ಕಾರದ ನಿಯಂತ್ರಣದಿಂದ ಮುಕ್ತವಾಗಿರಬೇಕು ಎಂಬುದು ನಮ್ಮ ಹೋರಾಟ ಎಂದಿದ್ದಾರೆ.
ಹಾಗೆಯೇ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಾಗಿನಿಂದ ನಾವು ಅಲ್ಪಸಂಖ್ಯಾತರನ್ನು ನ್ಯಾಯೋಚಿತವಾಗಿ ನಡೆಸಿಕೊಂಡು ಬಂದಿದ್ದೇವೆ. ಇದು ಮುಂದುವರಿಯುವ ಅವಧಿಯಲ್ಲಿಯೂ ಸಹ ನ್ಯಾಯಪ್ರದವಾಗಿ ಎಲ್ಲರನ್ನೂ ಸಮಾನವಾಗಿ ಕಾಣುತ್ತೇವೆ ಎಂದು ಹೇಳಿಕೊಂಡಿದ್ದಾರೆ.