Bantwala: ನಡುರಾತ್ರಿ ಪ್ರೇಮಿಗಳ ಭೇಟಿ: ಪ್ರಿಯತಮನನ್ನು ಕಟ್ಟಿ ಹಾಕಿ ಮನಸೋ ಇಚ್ಛೆ ಹಲ್ಲೆ! ಕೇಸು ದಾಖಲು
Bantwala: ಪ್ರೇಮಿಯೊಬ್ಬ ಪ್ರಿಯತಮೆಯನ್ನು ಭೇಟಿಯಾಗಲು ಬಂದ ಸಮಯದಲ್ಲಿ ಸ್ಥಳೀಯರ ಕೈಗೆ ಸಿಕ್ಕಿ, ನಂತರ ಆತನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ಇದೀಗ ಬೆಳಕಿಗೆ ಬಂದಿದೆ.
ಹೌದು, ಈ ಘಟನೆ ಬಂಟ್ವಾಳ (Bantwala) ಗ್ರಾಮಾಂತರ ಪೊಲೀಸ್ ಠಾಣೆಯ ಸಜಿಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ನಡೆದಿದ್ದು, ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ.
ಸದ್ಯ ಈ ಕುರಿತು ಹಲ್ಲೆಗೊಳಗಾದ ಯುವಕ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.