Kerala : ಉಡುಪಿ ಪರಶುರಾಮ ಪ್ರತಿಮೆ ನಿರ್ಮಾಣ ವಿವಾದ – ಮೂರ್ತಿ ಶಿಲ್ಪಿ ಕೃಷ್ಣ ನಾಯಕ್ ಅರೆಸ್ಟ್!!

Kerala: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್‌ನಲ್ಲಿ (Parashurama Theme Park) ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಶಿಲ್ಪಿ ಕೃಷ್ಣ ನಾಯ್ಕ ಅವರನ್ನು ಕೇರಳದಲ್ಲಿ ಪೋಲಿಸರು ಬಂಧಿಸಿದ್ದಾರೆ.

ಹೌದು, ಉಡುಪಿ(Udupi) ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರು ಉಮಿಕಲ್ ಬೆಟ್ಟದಲ್ಲಿನ ಪರಶುರಾಮ ಪ್ರತಿಮೆ ಕಳವು ಕುರಿತಂತೆ ಶಿಲ್ಪಿ ಕೃಷ್ಣ ನಾಯಕ್ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಕಾರ್ಕಳ ನಗರ ಠಾಣೆ ಪೊಲೀಸರು ಆರೋಪಿ ಕೃಷ್ಣ ನಾಯಕ್ ಅವರನ್ನು ಕೇರಳದ(Kerala) ಕ್ಯಾಲಿಕಟ್‌ನಲ್ಲಿ ಭಾನುವಾರ ಬಂಧಿಸಿದ್ದಾರೆ.

ಕೃಷ್ಣ ನಾಯ್ಕ್ ‘ಕೃಷ್ ಆರ್ಟ್ ವರ್ಲ್ಡ್’ ಎಂಬ ಸಂಸ್ಥೆಯ ಮೂಲಕ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1.25 ಕೋಟಿ ರೂ. ಹಣ ಪಡೆದುಕೊಂಡು ಕಾಮಗಾರಿ ನಡೆಸಿದ್ದು, ಅನಂತರ ಆರೋಪಿ ಕಂಚಿನ ಮೂರ್ತಿಯನ್ನು ಮಾಡದೆ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ ಆರೋಪಿಸಿ ನಲ್ಲೂರಿನ ಕೃಷ್ಣ ಶೆಟ್ಟಿ ಅವರು ಜೂನ್ ತಿಂಗಳಲ್ಲಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇತ್ತ ಎಫ್‌ಐಆರ್ ದಾಖಲಾದ ಬಳಿಕ ಬಂಧನದ ಭೀತಿಯಲ್ಲಿದ್ದ ಕೃಷ್ಣ ನಾಯಕ್ ನಿರೀಕ್ಷಣಾ ಜಾಮೀನು ಕೋರಿ ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ನ.7 ನಿರೀಕ್ಷಣಾ ಜಾಮೀನು ರದ್ದು ಆದೇಶ ಪ್ರಕಟಿಸಿದೆ. ಇತ್ತ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಆರೋಪಿ ಕೃಷ್ಣ ನಾಯ್ಕ ಬಂಧನ ಭೀತಿಯಿಂದ ಪರಾರಿಯಾಗಿದ್ದರು. ಆರೋಪಿಯ ಜಾಡು ಬೆನ್ನತ್ತಿದ ಕಾರ್ಕಳ ಪೊಲೀಸರು ಕೇರಳದ ಕ್ಯಾಲಿಕಟ್ ಎಂಬಲ್ಲಿ ಕೃಷ್ಣ ನಾಯಕ್‌ನನ್ನು ಬಂಧಿಸಿ ಕಾರ್ಕಳಕ್ಕೆ ಕರೆ ತರುತ್ತಿದ್ದಾರೆ.

Leave A Reply

Your email address will not be published.