Dakshina Kannada: ಗೃಹಲಕ್ಷ್ಮಿ ಹಣ ಕೂಡಿಟ್ಟು ಪತಿಗೆ ಸ್ಕೂಟರ್ ಕೊಡಿಸಿದ ಪತ್ನಿ

Dakshina Kannada: ರಾಜ್ಯ ಕಾಂಗ್ರೆಸ್ ಸರ್ಕಾರದ (Congress Governament) ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಲ್ಲಿ (Gruha Lakshmi Scheme) ಲಕ್ಷಾಂತರ ಬಡವರು ಪ್ರಯೋಜನ ಪಡೆಯುತ್ತಿದ್ದಾರೆ. ಇತ್ತೀಚೆಗೆ ಗೃಹಲಕ್ಷ್ಮಿ ಯೋಜನೆಯ ಹಣದಿಂದಾಗಿ ಮಹಿಳೆಯೊಬ್ಬರು ಊರಿಗೆ ಹೋಳಿಗೆ ಊಟ ಬಡಿಸುವ ಮೂಲಕ ರಾಜ್ಯದ ಗಮನಸೆಳೆದಿದ್ದರು. ಬೆಳಗಾವಿಯ ಮಹಿಳೆಯೊಬ್ಬರು ತನ್ನ ಗೃಹಲಕ್ಷ್ಮಿ ದುಡ್ಡಲ್ಲಿ ಗ್ರಂಥಾಲಯ ತೆರೆದು ಇಡೀ ನಾಡಿಗೆ ಮಾದರಿಯಾಗಿದ್ದರು. ಈಗ ಈ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯೊಬ್ಬರು ತನ್ನ ಗೃಹಲಕ್ಷ್ಮಿ ದುಡ್ಡನ್ನು ಕೂಡಿಟ್ಟು ಗಂಡನಿಗೆ ಸ್ಕೂಟಿಯನ್ನು ಕೊಡಿಸಿದ್ದಾರೆ.
ಹೌದು, ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಕೋಡಿಂಬಾಡಿ ಸಮೀಪದ ಶಾಂತಿನಗರ ನಿವಾಸಿ ಮಿಸ್ರಿಯಾ ಎಂಬವರು ತನ್ನ ಬ್ಯಾಂಕ್ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮಿ ಹಣದಿಂದ ಪತಿ ಸಲೀಂರಿಗಾಗಿ ಸ್ಕೂಟರ್ ಖರೀದಿ ಮಾಡಿದ್ದಾರೆ. ವೃತ್ತಿಯಲ್ಲಿ ಪೇಂಟರ್ ಆಗಿರುವ ಸಲೀಂ ನಿತ್ಯ ದೂರದ ಊರುಗಳಿಗೆ ಪೇಂಟಿಂಗ್ ಕೆಲಸಕ್ಕೆ ಹೋಗುತ್ತಿದ್ದರು. ಪತಿ ಕೆಲಸಕ್ಕೆ ತೆರಳಲು ಪತ್ನಿ ಮಿಸ್ರಿಯಾರ ಗೃಹಲಕ್ಷ್ಮಿ ಹಣ ಇದೀಗ ನೆರವಾದಂತಾಗಿದೆ.
ಇನ್ನು ಪತ್ನಿ ಕೊಡಿಸಿದ ತನ್ನ ಸ್ಕೂಟರ್ ಮೇಲೆ ಸಲೀಂ ಆರ್ಥಿಕ ನೆರವು ಗೃಹಲಕ್ಷ್ಮಿ ಎಂಬ ಭಿತ್ತಿಪತ್ರ ಅಂಟಿಸಿದ್ದಾರೆ. ಅದರಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮರ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಶಾಸಕ ಅಶೋಕ್ ಕುಮಾರ್ ರೈಯವರ ಫೊಟೋ ಹಾಕಿಸಿದ್ದಾರೆ. ಸನ್ಮಾನ ಸಲೀಂ ತನ್ನ ಪತ್ನಿ ನೀಡಿದ ಸ್ಕೂಟರ್‌ನೊಂದಿಗೆ ಶಾಸಕರನ್ನು ಭೇಟಿಯಾಗಿ ಸರ್ಕಾರದ ಗೃಹಲಕ್ಷ್ಮೀ ಹಣದಿಂದ ತನ್ನ ಬಾಳು ಬೆಳಗಿದೆ ಎಂದು ಹೇಳಿದ್ದಾರೆ.