Government rules: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಮಹತ್ವದ ಆದೇಶ: ಕಚೇರಿಗಳಲ್ಲಿ ಇನ್ಮುಂದೆ ‘ತಂಬಾಕು’ ನಿಷೇಧ!

Government rules: ಸರ್ಕಾರಿ ಕಚೇರಿಗಳಲ್ಲಿ ಆರೋಗ್ಯಕರ ಪರಿಸರ ಒದಗಿಸುವ ಹಿನ್ನೆಲೆಯಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಮತ್ತು ಆವರಣಗಳಲ್ಲಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿ ರಾಜ್ಯ ಸರ್ಕಾರ (Government rules) ಆದೇಶ ಹೊರಡಿಸಿದೆ.

ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಆಡಳಿತ ಸುಧಾರಣೆ ಇಲಾಖೆ ಈ ಸಂಬಂಧ ಆದೇಶ ಹೊರಡಿಸಿದೆ. ಯಾವುದೇ ಸರ್ಕಾರಿ ನೌಕರನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿ ಆವರಣದಲ್ಲಿ ಧೂಮಪಾನ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳ ಸೇವನೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಸಂಬಂಧ ಎಚ್ಚರಿಕೆಯ ಫಲಕವನ್ನು ಕಚೇರಿಯ ಸೂಕ್ತ ಸ್ಥಳಗಳಲ್ಲಿ ಪ್ರದರ್ಶಿಸುವಂತೆ ಸೂಚಿಸಿದೆ.

ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021ರ ನಿಯಮ-31ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಮಾದಕ ಪಾನೀಯ ಅಥವಾ ಮಾದಕ ವಸ್ತುವನ್ನು ಸೇವಿಸುವುದನ್ನು ಕೂಡ ನಿಷೇಧಿಸಲಾಗಿದೆ. ಶಾಸನತ್ಮಾಕ ಎಚ್ಚರಿಕೆಗಳ ಹೊರತಾಗಿಯೂ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿಯ ಆವರಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿಯ ಆರೋಗ್ಯದ ಹಿತದೃಷ್ಟಿಯಿಂದ ಯಾವುದೇ ಸರ್ಕಾರಿ ನೌಕರನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿ ಆವರಣದಲ್ಲಿ ಧೂಮಪಾನ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳ ಸೇವನೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

Leave A Reply

Your email address will not be published.