Mangalore: ಊಟದ ಬಳಿಕ ಕಾಡಿದ ಅಲರ್ಜಿ, ಅಲೋಶಿಯಸ್ ಕಾಲೇಜು ಉಪನ್ಯಾಸಕಿ ಸಾವು- ಸಾವಿನಲ್ಲೂ ಸಾರ್ಥಕತೆ ಮೆರೆದ ಲೆಕ್ಚರ್ !

Share the Article

Mangalore : ಮಂಗಳೂರಿನ ಅಲೋಶಿಯಸ್ ಕಾಲೇಜು ಉಪನ್ಯಾಸಕಿ ಒಬ್ಬರು ತಮ್ಮ ಕೊನೆಗಳಿಗೆಯಲ್ಲಿ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲಿಯೂ ಕೂಡ ಸಾರ್ಥಕತೆಯನ್ನು ಮೆರೆದಿದ್ದಾರೆ.

ಬಜ್ಪೆ ಪಡು ಪೆರಾರ ನಿವಾಸಿ ಗ್ರೇಶನ್ ಅಲೆಕ್ಸ್ ರೋಡ್ರಿಗಸ್ ಮತ್ತು ಗ್ರೆಟ್ಟಾ ಫ್ಲೇವಿಯಾ ದಂಪತಿಯ ಪುತ್ರಿಯಾಗಿರುವ ಗ್ಲೋರಿಯಾ ಒಂದು ವರ್ಷದ ಹಿಂದಷ್ಟೇ ಅಲೋಶಿಯಸ್ ಕಾಲೇಜಿನಲ್ಲಿಯೇ ಸ್ನಾತಕೋತ್ತರ ಪದವಿ ಪೂರೈಸಿ ಕೆಲಸಕ್ಕೆ ಸೇರಿದ್ದರು. ಸೇಂಟ್ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ ಗ್ಲೋರಿಯಾ ರೋಡ್ರಿಗಸ್( Gloria Rodriguez)ಅವರು ಅಲರ್ಜಿಗೆ ಸಂಬಂಧಿಸಿದ ಅನಾಫಿಲ್ಯಾಕ್ಸಿಸ್ ರಿಯಾಕ್ಷನ್ ನಿಂದ ಬಳಳುತ್ತಿದ್ದರು. ಆದ್ರೆ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಇದೀಗ ಅವರ ಅಂಗಾಂಗಗಳನ್ನು ದಾನಮಾಡಲಾಗಿದೆ.

ಅಷ್ಟಕ್ಕೂ ಆಗಿದ್ದೇನು?
ಕೆಲವು ದಿನಗಳ ಹಿಂದೆ ಊಟ ಮಾಡಿದ ಬಳಿಕ ಗ್ರೇಶನ್ ಅಲೆಕ್ಸ್ ರೋಡ್ರಿಗಸ್ ಅವರ ದೇಹದಲ್ಲಿ ಅಲರ್ಜಿ ಕಾಣಿಸಿಕೊಂಡಿತ್ತು. ಬಳಿಕ ಇದು ಉಲ್ಬಣಗೊಂಡ ಪರಿಣಾಮ ಮೆದುಳಿಗೆ ಹಾನಿಯಾಗಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದು ತೀವ್ರವಾದ ಮೆದುಳಿನ ಕಾಂಡದ ಅಸಾಧಾರಣ ಕ್ರಿಯೆಗೆ ಕಾರಣವಾಯಿತು. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು.
ವೈದ್ಯರ ಎರಡು ತಂಡಗಳು ಆಕೆಯನ್ನು 2 ಬಾರಿ ಶಸ್ತ್ರಚಿಕಿತ್ಸೆಗೆ ಒಳಪಡಿಸಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಪರಿಣಾಮ ಆಕೆಯ ಮೆದುಳು ನಿಷ್ಕ್ರಿಯವಾಗಿದೆ ಎಂದು ವೈದ್ಯರು ದೃಢಪಡಿಸಿದರು. ಆ ಬಳಿಕವೇ ಕುಟುಂಬಸ್ಥರು ಆಕೆಯ ಅಂಗಾಂಗ ದಾನಕ್ಕೆ ಮುಂದಾದರು ಎಂದು ಹೇಳಲಾಗಿದೆ. ಬುಧವಾರ ಅಂಗಾಂಗ ಕಸಿ ಶಸ್ತ್ರ ಚಿಕಿತ್ಸೆ ವೇಳೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಆಕೆಯ ಕುಟುಂಬ ಮತ್ತು ಸ್ನೇಹಿತರು ಹಾಜರಿದ್ದರು. ಆಕೆಯ ಅಕಾಲಿಕ ನಿಧನಕ್ಕೆ ಕಾಲೇಜು ಆಡಳಿತ ಮಂಡಳಿ, ಸಹೋದ್ಯೋಗಿಗಳು ಮತ್ತು ವಿದ್ಯಾರ್ಥಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.

ಸಧ್ಯ ಗ್ಲೋರಿಯಾ ಅವರ ಮೆದುಳು ನಿಷ್ಕ್ರೀಯಗೊಂಡ ಕಾರಣ ಅವರ ಮನೆಯವರು ಅಂಗಾಂಗ ದಾನಕ್ಕೆ ಒಪ್ಪಿಗೆ ಸೂಚಿಸಿದ್ದರು. ಈ ಹಿನ್ನಲೆ ರೋಡ್ರಿಗಸ್ ಅವರ ಯಕೃತ್ತನ್ನು ಎಜೆ ಆಸ್ಪತ್ರೆಗೆ, ಶ್ವಾಸಕೋಶವನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ, ಹೃದಯವನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ, ಮೂತ್ರಪಿಂಡವನ್ನು ಕೆಎಂಸಿ ಮಣಿಪಾಲಕ್ಕೆ ಮತ್ತು ಚರ್ಮ ಮತ್ತು ಕಾರ್ನಿಯಾವನ್ನು ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Leave A Reply

Your email address will not be published.