Mangalore: ಹೆಂಡತಿ, ಮಗುವನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ – ಕಾರ್ತಿಕ್ ಭಟ್ಟನ ಮತ್ತೊಂದು ಅವ್ಯವಹಾರ ಬೆಳಕಿಗೆ!!

Mangalore: ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಮುಲ್ಕಿಯ ಪಕ್ಷಿಕೆರೆ ಗ್ರಾಮದಲ್ಲಿ ಹೋಟೆಲ್ ಉದ್ಯಮಿ ಕಾರ್ತಿಕ್ ಭಟ್(Karthik Bhat) ಅವರು ತನ್ನ ಪತ್ನಿ ಹಾಗೂ ಮಗುವನ್ನು ಕೊಂದು ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಕಾರ್ತಿಕ್ ಭಟ್ ತಾಯಿ ಶ್ಯಾಮಲಾ ಭಟ್ ಹಾಗೂ ಸಹೋದರಿ ಕಣ್ಮಣಿಯನ್ನು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಕಾರ್ತಿಕ್ ಭಟ್ಟವರ ಅವ್ಯವಹಾರಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ.

ಹೌದು, ಕಾರ್ತಿಕ್ ಭಟ್ ತನ್ನ 10 ಪವನ್ ಚಿನ್ನವನ್ನು ಎಗರಿಸಿದ್ದಾನೆ ಎಂದು ಪಕ್ಷಿಕೆರೆ ಹೊಸಕಾಡು ನಿವಾಸಿ ಮಹಮ್ಮದ್ ಆರೋಪಿಸಿದ್ದಾರೆ. ಎರಡು ವರ್ಷದ ಹಿಂದೆ ಪಕ್ಷಿಕೆರೆ ಬ್ಯಾಂಕ್ ವೊಂದರಲ್ಲಿ ತನ್ನ 10 ಪವನ್ ಚಿನ್ನವನ್ನು ಅಡವಿಟ್ಟು 1 ಲಕ್ಷ 60 ಸಾವಿರ ಸಾಲ ಪಡೆದಿದ್ದ ಮಹಮ್ಮದ್ ಅವರಿಗೆ ಇನ್ನೂ ಹೆಚ್ಚಿನ ಸಾಲದ ಅಗತ್ಯವಿದೆ ಎಂದು ಅರಿತ ಕಾರ್ತಿಕ್ ಭಟ್‌ ತಾನೂ ಮ್ಯಾನೇಜರ್ ಆಗಿರುವ ಸುಬ್ರಹ್ಮಣ್ಯ ಸಹಕಾರಿ ಸಂಘದಲ್ಲಿ ಅಡವಿಟ್ಟರೆ ಹೆಚ್ಚಿನ ಸಾಲ ನೀಡುವುದಾಗಿ ಭರವಸೆ ನೀಡಿದ್ದ.

ಹೀಗಾಗಿ ಮಹಮ್ಮದ್ ಅವರು ಪಕ್ಷಿಕೆರೆ ಬ್ಯಾಂಕ್ ನಲ್ಲಿ ಅಡವಿಟ್ಟ ಚಿನ್ನವನ್ನು ಬಿಡಿಸಿ, ಕಾರ್ತಿಕ್ ಬ್ರಾಂಚ್‌ ಮ್ಯಾನೇಜರ್ ಆಗಿರುವ ಬ್ಯಾಂಕ್ ನಲ್ಲಿ ಇರಿಸಿ 3 ಲಕ್ಷ 4 ಸಾವಿರ ಸಾಲ ಪಡೆದಿದ್ದರು. ಈ ನಡುವೆ ವೈಯಕ್ತಿಕ ಸಮಸ್ಯೆಯಿಂದ ಮಹಮ್ಮದ್ ಅವರು ಊರಲ್ಲಿ ಇರದ ಕಾರಣ ಬ್ಯಾಂಕ್ ಗೆ ಸರಿಯಾಗಿ ಭೇಟಿ ನೀಡಿರಲಿಲ್ಲ. ಕಾರ್ತಿಕ್ ಅತ್ಮಹತ್ಯೆ ಮಾಡಿದ ಕಾರಣ ಸಂಶಯಗೊಂಡ ಮಹಮ್ಮದ್ ಅವರು ಈ ಬಗ್ಗೆ ಬ್ಯಾಂಕಿನಲ್ಲಿ ವಿಚಾರಿಸಿದಾಗ 4 ತಿಂಗಳಲ್ಲೇ ಅಡವಿಟ್ಟ ಬಂಗಾರ ಬಿಡಿಸಿದ ಬಗ್ಗೆ ಬ್ಯಾಂಕ್ ಅಧಿಕಾರಿಗಳು ವಿವರ ನೀಡಿದ್ದಾರೆ. ಕಾರ್ತಿಕ್ ಈ ಬಂಗಾರವನ್ನು ಅಲ್ಲಿಂದ ಎಗರಿಸಿ ಅದರ ಮೂಲ ಬೆಲೆಗೆ ಮಾರಿದ್ದಾನೆ ಎಂದು ಬಂಗಾರದ ಒಡವೆ ಕಳಕೊಂಡ ಮಹಮದ್ ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇಷ್ಟೇ ಅಲ್ಲದೆ ಅಲ್ಲದೆ ಕಾರ್ತಿಕ್ ಭಟ್ ತಾನು ಕೆಲಸ ಮಾಡುತ್ತಿದ್ದ ಸೊಸೈಟಿಯಲ್ಲಿ ಹಣಕ್ಕಾಗಿ ಕೆಲವು ಅವ್ಯವಹಾರಗಳಲ್ಲಿ ತೊಡಗಿಕೊಂಡಿದ್ದ ಈ ಕಾರಣಕ್ಕೆ ಆತನನ್ನು ಕೆಲಸದಿಂದ ತೆಗೆಯಲಾಗಿತ್ತು. ಕಾರ್ತಿಕ್ ಪತ್ನಿ ಪ್ರಿಯಾಂಕ, ಪ್ರತೀ ದಿನ ಸುರತ್ಕಲ್ ಗೆ ಜಿಮ್ ಗೆ ಹೋಗುತ್ತಿದ್ದು, ನಂತರ ಮನೆಯ ಕೋಣೆಯಲ್ಲಿ ಇರುತ್ತಿದ್ದಳು ಇಡೀ ದಿನ ಮನೆಯ ಕೊಣೆಯಲ್ಲಿ ಏನು ಮಾಡುತ್ತಿದ್ದಳು ಎಂಬುದೇ ಪ್ರಶ್ನೆಯಾಗಿದೆ. ಮನೆಯಲ್ಲಿ ಅವರಿದ್ದ ಕೋಣೆಯಲ್ಲಿ ಪತ್ತೆಯಾದ 2 ಚೂರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಪೋಲೀಸ್‌ ಮೂಲಗಳು ತಿಳಿಸಿವೆ. ಕಾರ್ತಿಕ ಮತ್ತು ಪ್ರಿಯಾಂಕ ಮೊಬೈಲ್ ಗಳು ಶೌಚಾಲಯದ ಕೊಮೊಡ್ ನಲ್ಲಿ ಸಿಕ್ಕಿದ್ದು ಈ ರೀತಿ ಯಾಕೆ ಮಾಡಿದ್ದಾರೆ ಎಂಬುವುದು ಇನಷ್ಟು ಸಂಶಯಕ್ಕೆ ಎಡೆ ಮಾಡಿದೆ. ಸದ್ಯ ಮುಲ್ಕಿ ಪೊಲೀಸರು ಇನ್ನಷ್ಟು ಮಾಹಿತಿಗಾಗಿ ತನಿಖೆ ನಡೆಸುತ್ತಿದ್ದಾರೆ.

Leave A Reply

Your email address will not be published.