Kukke Subramanya Temple: ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಭೇಟಿ!
Kukke Subramanya Temple:
ಭಾರತ ಕ್ರಿಕೆಟ್ ತಂಡದ ಖ್ಯಾತ ಬ್ಯಾಟರ್ ಸೂರ್ಯಕುಮಾರ್ ಯಾದವ್ ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ (Kukke Subramanya Temple) ಭೇಟಿ ನೀಡಿ ದರ್ಶನ ಪಡೆದರು.
ಹೌದು, ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಅವರು ಪತ್ನಿ ಸಮೇತ ಕುಕ್ಕೆ ದೇಗುಲಕ್ಕೆ ಆಗಮಿಸಿದ ಅವರು, ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕ ನೆರವೇರಿಸಿದರು. ಈ ವೇಳೆ, ಸೂರ್ಯಕುಮಾರ್ ಯಾದವ್ ದಂಪತಿಗೆ ದೇವಸ್ಥಾನದ ವತಿಯಿಂದ ಗೌರವಾರ್ಪಣೆ ಮಾಡಲಾಯಿತು.
ಈ ಹಿಂದೆ ಭಾರತ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ಗೆದ್ದ ಬಳಿಕ ಸೂರ್ಯಕುಮಾರ್ ಯಾದವ್ ಉಡುಪಿಯ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದರು. ಅಂತೆಯೇ ಟಿ20 ವಿಶ್ವಕಪ್ಗೂ ಮುನ್ನ ಸೂರ್ಯಕುಮಾರ್ ಯಾದವ್ ಭಾರತ ತಂಡ ಟ್ರೋಫಿ ಗೆಲ್ಲಲು ವಿಶೇಷ ಹರಕೆ ಹೊತ್ತಿದ್ದರು. ಅದರಂತೆ ಬಳಿಕ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ಸಲ್ಲಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಅವರು ಭಾರತ ಟಿ20 ಕ್ರಿಕೆಟ್ ತಂಡದ ನಾಯಕನಾಗಿ ಆಯ್ಕೆಯಾಗಿದ್ದರು.
Kartal su kaçağı tespiti Başakşehir su kaçağı tespiti: Başakşehir’de su kaçağı tespitinde uzman ekibimizle yanınızdayız. https://www.bondhuplus.com/ustaelektrikci
Çatalca su kaçak tespiti Küçük bir sızıntıyı bile tespit etmeleri çok etkileyiciydi! https://app.socie.com.br/ustaelektrikci