CM Siddaramaiah : ಇವರೆಲ್ಲರ ಬಿಪಿಎಲ್ ಕಾರ್ಡ್ ತಕ್ಷಣ ಕ್ಯಾನ್ಸಲ್ – ಸಿಎಂ ಸಿದ್ದರಾಮಯ್ಯ ಘೋಷಣೆ

CM Siddaramaiah : ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವವರ ಪಡಿತರ ಚೀಟಿ (ಬಿಪಿಎಲ್ ಕಾರ್ಡ್)​ ರದ್ದುಗೊಳಿಸುವಿಕೆ ವಿವಾದಕ್ಕೆ ಗುರಿಯಾದ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದೆ. ಹೀಗಾಗಿ ಸಿದ್ದರಾಮಯ್ಯ(CM Siddaramiah ) ಅವರು ಯಾರ್ಯಾರ ಬಿಪಿಎಲ್ ಕಾರ್ಡನ್ನು ರದ್ದು ಮಾಡುತ್ತೇವೆ ಎಂಬುದರ ಬಗ್ಗೆ ಅಪ್ಡೇಟನ್ನು ನೀಡಿದ್ದಾರೆ.

ಹೌದು, ಅನರ್ಹ ಪಡಿತರ ಕಾರ್ಡ್​ಗಳನ್ನು(Ration Card) ಮಾತ್ರ ರದ್ದುಪಡಿಸಲಾಗುತ್ತಿದೆ ಎಂದು ಈ ಮೊದಲು ಸಿಎಂ ಭರವಸೆ ನೀಡಿದ್ದರು. ಆದರೂ ಕೆಲವೆಡೆ ಬಿಪಿಎಲ್ ಕಾರ್ಡ್(BPL Card) ರದ್ದಾಗಿರುವುದು ಮತ್ತು ಎಪಿಎಲ್​ಗೆ ವರ್ಗಾವಣೆ ಆಗಿರುವುದು ತಿಳಿದು ಬಂದಿದ್ದು, ಸರ್ಕಾರವನ್ನು ಮುಜುಗರಕ್ಕೀಡು ಮಾಡಿದೆ. ಈ ಬೆನ್ನಲ್ಲೇ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ(IT) ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿಯನ್ನೂ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರರಿಗೆ ಬಿಪಿಎಲ್‌ ಕಾರ್ಡ್ ನೀಡಿದ್ದರೆ ಅದನ್ನು ರದ್ದುಪಡಿಸಿ ಎಪಿಎಲ್‌ಗೆ ಪರಿವರ್ತಿಸಬೇಕು. ಇವರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸು ನೀಡುವಂತೆ ಸಿಎಂ ಆದೇಶಿಸಿರುವುದಾಗಿ ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

Leave A Reply

Your email address will not be published.