Lakshmi Hebbalkar: BPL ಕಾರ್ಡ್ ರದ್ದಾದರೆ ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ? ಇಲ್ಲಿದೆ ನೋಡಿ ಹೊಸ ಅಪ್ಡೇಟ್

Lakshmi Hebbalkar:ರಾಜ್ಯದಲ್ಲಿ ಕೆಲವು ದಿನಗಳಿಂದ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಭಾರಿ ಸುದ್ದಿಯಾಗುತ್ತಿದೆ. ಈ ಬೆನ್ನಲ್ಲೇ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಕಾರ್ಡಿಗೆ ವರ್ಗಾವಣೆಯಾದರೆ ಗೃಹಲಕ್ಷ್ಮಿ ಹಣ ಕೂಡ ನಿಲ್ಲುತ್ತದೆ ಎಂಬ ಸುದ್ದಿ ಸದ್ದು ಮಾಡುತ್ತಿದೆ. ಆದರೆ ಈಗ ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(Lakshmi Hebbalkar)ಅವರು ಸ್ಪಷ್ಟೀಕರಣ ನೀಡಿದ್ದಾರೆ.

ಹೌದು, ಅಕ್ರಮ ಬಿಪಿಎಲ್‌ ಕಾರ್ಡ್‌ ರದ್ದಾದ ಕೂಡಲೇ ಗೃಹಲಕ್ಷ್ಮಿ ಯೋಜನೆ 2000 ರೂ. ಖಾತೆಗೆ ಜಮೆ ಆಗುವುದು ರದ್ದಾಗುತ್ತದೆ ಎಂಬ ಆತಂಕ ಹಲವು ಫಲಾನುಭವಿಗಳಿಗೆ ಎದುರಾಗಿದ್ದು, ಇದೀಗ ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಸ್ಪಷ್ಟನೆ ನೀಡಿದ್ದಾರೆ. ಬಿಪಿಎಲ್ ಕಾರ್ಡ್ ರದ್ದಾಗಿದ್ದರೂ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಈ ಮೂಲಕ ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ ದೊರೆತಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಬರುವುದಿಲ್ಲ, ಬಿಪಿಎಲ್ ಗೆ ಅರ್ಹವಲ್ಲದ ಕಾರ್ಡ್ ಗಳನ್ನು ಮಾತ್ರ ಎಪಿಎಲ್ ಗೆ ಬದಲಾವಣೆ ಮಾಡಲಾಗಿದೆ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾಗಿದ್ದರೂ ತೆರಿಗೆ ಪಾವತಿಸಿದರೆ ಗೃಹಲಕ್ಷ್ಮಿ ಹಣ ಬರುವುದಿಲ್ಲ. ತೆರಿಗೆ ಪಾವತಿಸದಿದ್ದರೆ ಮಾತ್ರ ಹಣ ಖಾತೆಗೆ ಜಮಾ ಆಗಲಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡ್ ಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಯಾವುದೇ ಗೊಂದಲ ಇಲ್ಲ. ಬಿಪಿಎಲ್ ಕಾರ್ಡ್, ಎಪಿಎಲ್ ಕಾರ್ಡ್ ಇದ್ದವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತದೆ ಎಂದು ತಿಳಿಸಿದ್ದಾರೆ.

Leave A Reply

Your email address will not be published.