Channapattana By Election : ಚನ್ನಪಟ್ಟಣದಲ್ಲಿ ಇವರ ಗೆಲುವು ನಿಶ್ಚಿತ? ಸಮೀಕ್ಷೆಯಿಂದ ಹೊರ ಬಿತ್ತು ಪಕ್ಕಾ ಮಾಹಿತಿ

Channapattana By Election : ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಚನ್ನಪಟ್ಟಣ ವಿಧಾನಸಭಾ ‌ಉಪಚುನಾವಣೆ ಫಲಿತಾಂಶ ನವೆಂಬರ್ 23ರಂದು ಹೊರಬೀಳಲಿದೆ. ಪ್ರಮುಖ ಪಕ್ಷಗಳ ಅಭ್ಯರ್ಥಿಗಳ ಸೋಲು – ಗೆಲುವಿನ ಕುರಿತು ಸಾಕಷ್ಟು ಚರ್ಚೆಗಳು ನಡೆದಿವೆ. ಹಲವು ಎಕ್ಸಿಟ್ ಪೋಲ್ಗಳು ಸೋಲು ಗೆಲುವಿನ ಸಮೀಕ್ಷೆಗಳನ್ನು ಕೂಡ ನಡೆಸಿವೆ. ಹಾಗಿದ್ರೆ ಚನ್ನಪಟ್ಟಣದಲ್ಲಿ ಗೆಲುವು ಯಾರಿಗೆ ಸೋಲು ಯಾರಿಗೆ? ನೋಡೋಣ ಬನ್ನಿ

 

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ(Channapattana By Election ) ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ(Nikhil Kumarswamy ) ಹಾಗೂ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್(CP Yogishwar ) ಅಖಾಡಲ್ಲಿದ್ದಾರೆ. ಈ ಚುನಾವಣೆ ತೀವ್ರ ಹಣಾಹಣಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಚನ್ನಪಟ್ಟಣದತ್ತ ಬೆಟ್ಟಿಂಗ್ ದಾರರು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಚನ್ನಪಟ್ಟಣ ಡಿ ಕೆ ಬ್ರದರ್ಸ್‌ ಗೆ ಪ್ರತಿಷ್ಠೆಯಾಗಿದ್ರೆ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿಗೆ ಅಸ್ತಿತ್ವದ ಪ್ರಶ್ನೆಯಾಗಿದೆ.

ಚುನಾವಣೆ ಮುಗಿದ ಬೆನ್ನಲ್ಲೇ ಒಂದಷ್ಟು ಸಂಸ್ಥೆಗಳು ಸಮೀಕ್ಷೆ ನಡೆಸುವುದು ಕಾಮನ್. ಅದರಂತೆ ಇದೊಇಗ ಚನ್ನಪಟ್ಟಣದಲ್ಲಿ P-Marq ಎಂಬ ಸಂಸ್ಥೆ ಮತದಾನೋತ್ತರ ಸಮೀಕ್ಷೆಯನ್ನು ನಡೆಸಿದೆ. ಈ ಸಮೀಕ್ಷೆಯ ವರದಿ ಪ್ರಕಾರ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿಗೇನೆ ಜನ ಜೈ ಎಂದಿದ್ದಾರೆ ಎನ್ನಲಾಗಿದೆ. ಎರಡು ಬಾರಿ ಸೋತಿದ್ದ ನಿಖಿಲ್ ಕುಮಾರಸ್ವಾಮಿ ಮೂರನೇ ಬಾರಿಯೂ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು.

ಆರಂಭದಲ್ಲಿ ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಸಿ ಪಿ ಯೋಗೇಶ್ವರ್‌ ಅವರೇ ಮೇಲುಗೈ ಸಾಧಿಸಿದ್ದರು. ಆದರೆ ಬರಬರುತ್ತಾ ಜೆಡಿಎಸ್‌ ಅಭ್ಯರ್ಥಿಯಾಗಿದ್ದ ನಿಖಿಲ್ ಕುಮಾರಸ್ವಾಮಿ ಅವರಲ್ಲಿ ಆತ್ಮವಿಶ್ವಾಸ ಎದ್ದು ಕಾಣುತ್ತಿತ್ತು. ಚುನಾವಣೆಯ ಕೊನೆಯ ಹಂತದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿದ್ದ ಹೇಳಿಕೆ ಚನ್ನಪಟ್ಟಣ ಉಪ ಚುನಾವಣೆಯ ಮೇಲೆ ತೀವ್ರ ಪ್ರಭಾವ ಬೀರಿದೆ. ಇದನ್ನು ಸ್ವತಃ ಕಾಂಗ್ರೆಸ್‌ ಅಭ್ಯರ್ಥಿ ಸಿ ಪಿ ಯೋಗೇಶ್ವರ್‌ ಅವರೇ ಒಪ್ಪಿಕೊಂಡಿದ್ದಾರೆ. ಇನ್ನು ಚನ್ನಪಟ್ಟಣದಲ್ಲಿ ಗೆಲ್ಲುವ ಬಗ್ಗೆ ಪೂರ್ತಿ ವಿಶ್ವಾಸವನ್ನು ಸಿ ಪಿ ಯೋಗೇಶ್ವರ್‌ ಅವರು ವ್ಯಕ್ತಪಡಿಸಿಲ್ಲ, ಹೀಗಾಗಿ ಎರಡು ಬಾರಿ ಚುನಾವಣೆಯಲ್ಲಿ ಸೋಲು ಕಂಡ ನಿಖಿಲ್‌ ಕುಮಾರಸ್ವಾಮಿ ಅವರು ಈ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಲಾಗಿದೆ.

Leave A Reply

Your email address will not be published.