Channapattana By Election : ಮತ ಎಣಿಕೆ ಆರಂಭ, ಆರಂಭದಲ್ಲೇ ಯೋಗೀಶ್ವರ್ ಗೆ ಶಾಕ್ ಕೊಟ್ಟ ನಿಖಿಲ್!!

Share the Article

Channapattana By Election : ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಚನ್ನಪಟ್ಟಣ ವಿಧಾನಸಭಾ ‌ಉಪಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ. ಈ ನಡುವೆ ಪ್ರಮುಖ ಪಕ್ಷಗಳ ಅಭ್ಯರ್ಥಿಗಳ ಸೋಲು – ಗೆಲುವಿನ ಕುರಿತು ಸಾಕಷ್ಟು ಚರ್ಚೆಗಳು ನಡೆದಿವೆ. ಅದರಲ್ಲೂ ಇಂದು ಎಣಿಕೆ ಆರಂಭವಾಗಿದ್ದು ಇರುವಿನಲ್ಲಿಯೇ ನಿಖಿಲ್ ಕುಮಾರಸ್ವಾಮಿ ಅವರು ಸೈನಿಕ ಸಿ ಪಿ ಯೋಗೇಶ್ವರ್ ಅವರಿಗೆ ಶಾಕ್ ನೀಡಿದ್ದಾರೆ.

ಚನ್ನಪಟ್ಟಣ (Channapatna) ಕ್ಷೇತ್ರದ ಮತ ಎಣಿಕೆ (Counting) ಪ್ರಕ್ರಿಯೆ ಆರಂಭವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ (CP Yogeshwar)​ ಅವರಿಗಿಂತ ಜೆಡಿಎಸ್​ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಆರಂಭಿಕ ಮುನ್ನಡೆ ಕಾಯ್ದು ಕೊಂಡಿದ್ದಾರೆ.

ತೀವ್ರ ಕುತೂಹಲ ಮೂಡಿಸಿದ್ದ ಉಪಚುನಾವಣೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಮಾಡಲಾಗಿದೆ. ಅಂಚೆ ಮತಗಳಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

Leave A Reply