Election: ಸಂಡೂರು ಉಪಚುನಾವಣೆ ಫಲಿತಾಂಶ: ಕಾಂಗ್ರೆಸ್ ಅಭ್ಯರ್ಥಿ ‘ಅನ್ನಪೂರ್ಣ ತುಕಾರಾಂ’ಗೆ ಭರ್ಜರಿ ಗೆಲುವು
Election: ಸಂಡೂರು ವಿಧಾನಸಭೆ ಉಪಚುನಾವಣೆಯಲ್ಲಿ (Election) ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸದ್ಯ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಎಂದು ಹೇಳಲಾಗುತ್ತಿದೆ.
ಅನ್ನಪೂರ್ಣ ತುಕಾರಾಂ ಅವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ 9000 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಈ ಹಿನ್ನೆಲೆ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ.