School: ರಾಜ್ಯದ 42 ಶಾಲೆಗಳಲ್ಲಿ ಎಲ್‌ಕೆಜಿ ಆರಂಭಕ್ಕೆ ಶಾಲಾ ಶಿಕ್ಷಣ ಇಲಾಖೆ ಅನುಮೋದನೆ!

School: ರಾಜ್ಯದ 42 ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ 51 ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಹೆಚ್ಚುವರಿ ವಿಭಾಗ ಆರಂಭಿಸಲು ಶಾಲಾ ಶಿಕ್ಷಣ ಇಲಾಖೆ ಒಪ್ಪಿಗೆ ನೀಡಿದೆ.

 

ಪ್ರಸಕ್ತ ಶೈಕ್ಷಣಿಕ ವರ್ಷದ ಆರಂಭದಲ್ಲಿ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪೂರ್ವಪ್ರಾಥಮಿಕ ಶಾಲೆಗಳನ್ನು (School) ಆರಂಭಿಸಲಾಗಿತ್ತು. ಈಗ ಮತ್ತೆ 42 ಶಾಲೆಗಳಿಗೆ ಇಲಾಖೆಯ ಆಯುಕ್ತ ಕೆ.ವಿ. ತ್ರಿಲೋಕ್‌ಚಂದ್ರ ಅನುಮತಿ ನೀಡಿದ್ದಾರೆ.

ಸರ್ಕಾರಿ ಶಾಲೆಗಳ ಬಲವರ್ಧನೆಗೆ ಕೆಲ ವರ್ಷಗಳ ಹಿಂದೆಯೇ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಆರಂಭಿಸಲಾಗಿತ್ತು. ಹಾಗೆಯೇ, ಒಂದನೇ ತರಗತಿಯಿಂದಲೇ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಿತ್ತು. ಪ್ರಸ್ತುತ ಇರುವ 286 ಪಬ್ಲಿಕ್‌ ಶಾಲೆಗಳಲ್ಲಿ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿರುವ 51 ಶಾಲೆಗಳಲ್ಲಿ ಹೆಚ್ಚುವರಿ ಆಂಗ್ಲ ಮಾಧ್ಯಮ ವಿಭಾಗ ಆರಂಭಿಸಲಾಗುತ್ತಿದೆ.

Leave A Reply

Your email address will not be published.