Love Marriage: ಪ್ರೇಮ ವಿವಾಹ ಎರಡೇ ವರ್ಷಕ್ಕೆ ಅಂತ್ಯ: ಅಣ್ಣನಿಗೆ ಸೆಂಡ್ ಮಾಡಿದ ಡೆತ್ನೋಟ್ ನಲ್ಲಿ ಕಾದಿತ್ತು ಶಾಕಿಂಗ್ ನ್ಯೂಸ್!
Love Marriage: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗುಮ್ಮನಹಳ್ಳಿಯಲ್ಲಿ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗಂಡನ ಮನೆಯಲ್ಲೇ ನೇಣು ಬಿಗಿದುಕೊಂಡು ಆರು ತಿಂಗಳ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ.
ಆರು ತಿಂಗಳ ಗರ್ಭಿಣಿ ಗಂಡನ ಮನೆಯವರು ನೀಡಿದ ಕಿರುಕುಳಕ್ಕೆ ಬೇಸತ್ತು ಸಾವಿರ ಕನಸು ಕಂಡ ತನ್ನ ಜೀವನವನ್ನು ತಾನೇ ಅಂತ್ಯಗೊಳಿಸಿದ್ದಾಳೆ. ಈಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಗುಮ್ಮನಹಳ್ಳಿ ನಿವಾಸಿ ಸುರೇಶ್ ಜೊತೆ ಕಳೆದ 2 ವರ್ಷದಿಂದಷ್ಟೆ ಮದುವೆ ಆಗಿದ್ದರು.
ಕಳೆದ ಎರಡು ವರ್ಷಗಳ ಹಿಂದೆ ಪರಸ್ಪರ ಎರಡು ಮನೆಯವರನ್ನ ಒಪ್ಪಿಸಿ ಮದುವೆಯಾಗಿದ್ದ (Love Marriage) ರೂಪ ಮತ್ತು ಸುರೇಶ್ ಆರು ತಿಂಗಳವರೆಗೂ ಸುಖ ಸಂಸಾರ ಮಾಡಿದ್ದಾರೆ. ಆದರೆ ಆರು ತಿಂಗಳು ಕಳೆಯುತ್ತಿದ್ದಂತೆ ನನಗೆ ಸಾಲಗಾರರ ಕಾಟ ಜಾಸ್ತಿಯಾಗುತ್ತಿದೆ. ಮದುವೆಗೆ ಸಾಲ ಮಾಡಿದ್ದು, ಬೇರೆ ಹುಡುಗಿಯನ್ನ ಮದುವೆಯಾಗಿದ್ದರೆ ಹೆಚ್ಚಿನ ವರದಕ್ಷಿಣೆ ಸಿಗುತ್ತಿತ್ತು.ಲ್ ಎಂದು ಇದೇ ನೆಪದಲ್ಲಿ ಪದೇ ಪದೇ ತವರು ಮನೆಗೆ ಹೋಗಿ ಹಣ ತೆಗೆದುಕೊಂಡು ಬಾ ಅಂತ ತವರು ಮನೆಗೆ ಕಳಿಸುತ್ತಿದ್ದ ಕಾರಣ ರೂಪ ಬೇಸತ್ತಿದ್ದಾಳೆ. ಇತ್ತ ತವರು ಮನೆಯವರು ಅಡ್ಜೆಸ್ಟ್ ಮಾಡಿಕೊಂಡು ಬಾಳಮ್ಮ ಅಂದಿದ್ರಂತೆ. ಆದ್ರೆ ಗಂಡನ ಮನೆಯವರ ಕಿರುಕುಳ ತಾಳಲಾರದೆ ಬೇಸತ್ತ ತುಂಬು ಗರ್ಭಿಣಿ ರೂಪ ಗಂಡನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇನ್ನು ಆತ್ಮಹತ್ಯೆಗೆ ಶರಣಾಗುವ ಮುನ್ನ ಬುಕ್ ಒಂದರಲ್ಲಿ ಪ್ರೀತಿಯ ಅಣ್ಣನಿಗೆ ತಂಗಿ ಮಾಡುವ ನಮಸ್ಕಾರಗಳು. ಅಣ್ಣ ನಾನು ನಿನ್ನ ಮಾತು ಕೇಳದೆ ತಪ್ಪು ಮಾಡಿ ಈ ಮದುವೆ ಆದೆ. ನನಗೆ ಇಲ್ಲಿ ಒಂದು ದಿನವು ನೆಮ್ಮದಿಯಿಲ್ಲ. ನನ್ನ ಜೀವನಕ್ಕೆ ನರಕವಾಗಿದೆ. ಸಾಧ್ಯವಾದರೆ ಕ್ಷಮಿಸು. ಮುಂದಿನ ಜನ್ಮವಿದ್ದರೆ ನಿನ್ನ ಋಣ ತೀರಿಸುತ್ತೇನೆ. ಅಪ್ಪ, ಅಮ್ಮ, ಅಜ್ಜಿಗೆ ನನ್ನ ಕೊನೆಯ ನಮನಗಳು. ನನ್ನ ಸಾವಿಗೆ ದಯವಿಟ್ಟು ನ್ಯಾಯ ಕೊಡಿಸು. ನನ್ನ ಸಾವಿಗೆ ಅತ್ತೆ, ಮಾವ, ನನ್ನ ಗಂಡ ಮತ್ತು ಗಂಡನ ಮನೆಯವರೇ ಕಾರಣ. ನನ್ನ ಅತ್ತೆ ದೇವಮ್ಮ, ಮಾಮ ನರಸಿಂಹಮೂರ್ತಿ ಮತ್ತು ಗಂಡ ಸುರೇಶ್ ಇವರಿಗೆ ಶಿಕ್ಷೆ ಕೊಡಿಸಿ ನನಗೆ ನ್ಯಾಯ ಕೊಡಿಸಿ ಅಣ್ಣ ದಯವಿಟ್ಟು. ಇಂತಿ ನಿಮ್ಮ ಪ್ರೀತಿಯ ತಂಗಿ ರೂಪ ರತ್ನಮ್ಮ ಜಿಆರ್ ಎಂದು ಡೆತ್ ನೋಟ್ ಬರೆದು ಅಣ್ಣನಿಗೆ ವಾಟ್ಸ್ ಆಪ್ ಮೂಲಕ ಫೋಟೋ ಕಳಿಸಿದ್ದಾರೆ.
ಆದ್ರೆ ಈ ಕುರಿತು ಮೃತಳ ಗಂಡ ಸುರೇಶ್ ಸಹೋದರನನ್ನ ಕೇಳಿದರೆ ಮನೆಯಲ್ಲಿ ಯಾವುದೇ ಗಲಾಟೆಗಳು ಆಗ್ತಿರಲಿಲ್ಲ. ರೂಪ ಅವರ ಮಾವ ನಿವೃತ್ತ ಸರ್ಕಾರಿ ಅಧಿಕಾರಿಯಾಗಿದ್ದು ಹಣದ ಆಸೆ ಇದ್ದಿದ್ದರೆ ಮದುವೆ ಯಾಕೆ ಮಾಡ್ತಿದ್ರು ಅಂತ ವರದಕ್ಷಿಣೆ ಕಿರಕುಳ ಆರೋಪವನ್ನ ತಳ್ಳಿ ಹಾಕಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ಇನ್ನಷ್ಟೇ ತಿಳಿದು ಬರಬೇಕಿದೆ.